ಬೆಂಗಳೂರು : ದೆಹಲಿಯಲ್ಲಿರುವ ಪ್ರಧಾನಿ ಮೋದಿಯವರ ನಿವಾಸದ ರಸ್ತೆಯಲ್ಲೂ ಗುಂಡಿಗಳಿವೆ. ಇಡೀ ದೇಶದಲ್ಲಿ ಇದೇ ಸ್ಥಿತಿ ಇದೆ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ತಿರುಗೇಟು ನೀಡಿದ್ದಾರೆ.
ಬಿಹಾರಕ್ಕೆ ತೆರಳುವ ಮುನ್ನ ಸದಾಶಿವನಗರದ ನಿವಾಸದಲ್ಲಿ ಮಾತನಾಡಿದ ಅವರು, ಈ ಹಿಂದೆ ಬಿಜೆಪಿ ಆಡಳಿತದಲ್ಲಿ ಸರಿಯಾದ ರಸ್ತೆ ಮಾಡಿದರೆ ಇವತ್ತು ಈ ರೀತಿಯ ಪರಿಸ್ಥಿತಿ ಬರುತ್ತಿಲಿಲ್ಲ ಎಂದಿದ್ದಾರೆ.
ನಮ್ಮ ಜಿಬಿಎ ಅಧಿಕಾರಿಗಳು ಪ್ರತಿನಿತ್ಯ 1,000 ಗುಂಡಿಗಳನ್ನ ಮುಚ್ಚುತ್ತಿದ್ದಾರೆ. ಅವ್ರು ನಾವು ಅದಷ್ಟು ಬೇಗ ಗುಂಡಿಗಳಿಂದ ಮುಕ್ತ ಬೆಂಗಳೂರು ಮಾಡುತ್ತೇವೆ ಅಂತಿದ್ದಾರೆ ಎಂದು ಭರವಸೆಯ ಮಾತುಗಳನ್ನಾಡಿದ್ದಾರೆ.
ನಾವು ಗುಂಡಿಗಳನ್ನು ಮುಚ್ಚಿಸೋ ಕೆಲಸ ಮಾಡತ್ತಾ ಇದ್ದೇವೆ. ಬರೀ ಬೆಂಗಳೂರಿನಲ್ಲಿ ಮಾತ್ರ ಗುಂಡಿಗಳು ಇರೋ ರೀತಿ ಬಿಂಬಿಸಲಾಗುತ್ತಿದೆ ಎಂದು ದೂರಿದ್ದಾರೆ ಎನ್ನಲಾಗಿದೆ.















