ಮೈಸೂರು : ಜನಸೇವೆಯಲ್ಲಿ 50 ವರ್ಷ ಪೂರೈಸಿದ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಅಭಿಮಾನೋತ್ಸವವು ಮೇ 9ರಂದು ಚಿತ್ರದುರ್ಗದಲ್ಲಿ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪನವರನ್ನು ಸನ್ಮಾನಿಸಲಿದ್ದಾರೆ.
ಈ ಕಾರ್ಯಕ್ರಮಕ್ಕೆ ಸ್ವಪಕ್ಷದವರೇ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಹೌದು…ಮೇ 9ರಂದು ಚಿತ್ರದುರ್ಗದಲ್ಲಿ ಆಯೋಜಿಸಿರುವ ಯಡಿಯೂರಪ್ಪ ಅಭಿಮಾನೋತ್ಸವಕ್ಕೆ ಬಿಜೆಪಿ ಪರಿಷತ್ ಸದಸ್ಯ ಹೆಚ್.ವಿಶ್ವನಾಥ್ ವಿರೋಧ ವ್ಯಕ್ತಪಡಿಸಿದ್ದಾರೆ.
ಮೈಸೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ವಿಶ್ವನಾಥ್, ಪೋಕ್ಸೋ ಪ್ರಕರಣದ ಆರೋಪಕ್ಕೆ ಯಡಿಯೂರಪ್ಪ ಗುರಿಯಾಗಿದ್ದಾರೆ. ಇದು ಗಂಭೀರ ಪ್ರಕರಣವಾಗಿದೆ. ಇದೀಗ ಅವರ ಅಭಿಮಾನೋತ್ಸವಕ್ಕೆ ಮುಂದಾಗಿರುವುದು ಸರಿಯಲ್ಲ. ಈ ಎರಡೂ ಪ್ರಕರಣಗಳು ರಾಜ್ಯಕ್ಕೆ ಕಪ್ಪುಚುಕ್ಕೆಯಾಗಿ ಪರಿಣಮಿಸಿವೆ. ವಕೀಲ ಸಿದ್ದರಾಮಯ್ಯಗೆ ಇದೆಲ್ಲಾ ಗೊತ್ತಿಲ್ಲವೇ ಎಂದು ವಾಗ್ದಾಳಿ ನಡೆಸಿದ್ದಾರೆ.
















