ಮನೆ ರಾಜ್ಯ ಕರ್ನಾಟಕದಲ್ಲಿ ಕಾಂಗ್ರೆಸ್ ಪರ ಅಲೆ ಇದೆ: ಮತ ಚಲಾಯಿಸಿದ ಬಳಿಕ ಸಿಎಂ ಸಿದ್ದರಾಮಯ್ಯ ಹೇಳಿಕೆ

ಕರ್ನಾಟಕದಲ್ಲಿ ಕಾಂಗ್ರೆಸ್ ಪರ ಅಲೆ ಇದೆ: ಮತ ಚಲಾಯಿಸಿದ ಬಳಿಕ ಸಿಎಂ ಸಿದ್ದರಾಮಯ್ಯ ಹೇಳಿಕೆ

0

ಮೈಸೂರು: ಲೋಕಸಭೆ ಚುನಾವಣೆ 2024ರ 2ನೇ ಹಂತದ ಮತದಾನವಾದ ಇಂದು ಏಪ್ರಿಲ್ 26ರ ಶುಕ್ರವಾರ ಕರ್ನಾಟಕದಲ್ಲಿ ಮೊದಲ ಹಂತದ ಮತದಾನ ನಡೆಯುತ್ತಿದೆ. ಬೆಳಗ್ಗೆ 7 ಗಂಟೆಗೆ ಆರಂಭವಾದ ಮತದಾನ ಸಂಜೆ 6 ಗಂಟೆಯ ತನಕ ಮತದಾನ ಮಾಡಲು ಅವಕಾಶವಿದೆ.

Join Our Whatsapp Group

ಕರ್ನಾಟಕದ 28 ಲೋಕಸಭಾ ಕ್ಷೇತ್ರಗಳ ಪೈಕಿ ಬೆಂಗಳೂರು ನಗರ ಸೇರಿ ಇಂದು 14 ಕ್ಷೇತ್ರಗಳಲ್ಲಿ ಮತದಾನ ನಡೆಯುತ್ತಿದೆ.

ತಮ್ಮ ತವರು ಜಿಲ್ಲೆ ಮೈಸೂರಿನ ಸಿದ್ದರಾಮನಹುಂಡಿಯಲ್ಲಿ ತಮ್ಮ ಹಕ್ಕು ಚಲಾಯಿಸಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಕಳೆದ ವಿಧಾನಸಭಾ ಚುನಾವಣೆಯಲ್ಲಿ ಜನ ಕಾಂಗ್ರೆಸ್ ಪಕ್ಷವನ್ನು ಗೆಲ್ಲಿಸಿದ್ದಾರೆ. ಹಾಗೆಯೇ ಈ ಬಾರಿಯ ಚುನಾವಣೆಯಲ್ಲಿಯೂ ಜನ ಆಶೀರ್ವಾದ ಮಾಡುತ್ತಾರೆ, ಕರ್ನಾಟಕದಲ್ಲಿ ಕಾಂಗ್ರೆಸ್ ಪರ ಅಲೆ ಇದೆ ಎಂದರು.

ನಿನ್ನೆ ಹಾಗೂ ಮೊನ್ನೆ 2ನೇ ಹಂತದ ಚುನಾವಣೆ ಇರುವ ಕ್ಷೇತ್ರಗಳಲ್ಲಿ ಪ್ರಚಾರ ಮಾಡಿದೆ. ಈ ವೇಳೆ ಜನರಿಂದ ಒಳ್ಳೆಯ ಪ್ರತಿಕ್ರಿಯೆ ಸಿಕ್ಕಿದೆ. ಬೀದರ್ ಹಾಗೂ ಕಲಬುರಗಿ ಎರಡು ಕ್ಷೇತ್ರವನ್ನು ಗೆಲ್ಲುತ್ತೇವೆ ಎಂದರು.

ನಿನ್ನೆ ಹಾಗೂ ಮೊನ್ನೆ 2ನೇ ಹಂತದ ಚುನಾವಣೆ ಇರುವ ಕ್ಷೇತ್ರಗಳಲ್ಲಿ ಪ್ರಚಾರ ಮಾಡಿದೆ. ಈ ವೇಳೆ ಜನರಿಂದ ಒಳ್ಳೆಯ ಪ್ರತಿಕ್ರಿಯೆ ಸಿಕ್ಕಿದೆ. ಬೀದರ್ ಹಾಗೂ ಕಲಬುರಗಿ ಎರಡು ಕ್ಷೇತ್ರವನ್ನು ಗೆಲ್ಲುತ್ತೇವೆ ಎಂದರು. 14 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಎಷ್ಟು ಸ್ಥಾನ ಗೆಲ್ಲುತ್ತೆ ಎಂಬ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಸಿಎಂ, ಗುಪ್ತ ಮತದಾನವಾಗಿದ್ದರಿಂದ ಎಷ್ಟು ಕ್ಷೇತ್ರಗಳಲ್ಲಿ ಗೆಲ್ಲುತ್ತೇವೆ ಎಂಬುದನ್ನು ಹೇಳೋಕೆ ಆಗಲ್ಲ. ಆದರೆ ಹೆಚ್ಚು ಸ್ಥಾನದಲ್ಲಿ ಗೆಲ್ಲುತ್ತೇವೆ. ಚಾಮರಾಜನಗರ ಹಾಗೂ ಮೈಸೂರಿನಲ್ಲಿಯೂ ನಾವು ಗೆಲ್ಲುತ್ತೇವೆ ಎಂದರು.

ಜೆಡಿಎಸ್ ವರಿಷ್ಠ ದೇವೇಗೌಡರ ಕಣ್ಣೀರು ಕೃತಕವಾದದ್ದು. ರಾಜಕಾರಣ ವಿಚಾರದಲ್ಲಿ ಕಣ್ಣೀರು ಬರಬಾರದು. ಅದರೆ ದೇವೇಗೌಡರ ಕುಟುಂಬ ಯಾವಾಗಲೂ ಕಣ್ಣೀರು ಹಾಕುತ್ತಾರೆ. ಇದೆಲ್ಲ ಕೃತಕವಾದದ್ದು ಎಂದು ಸಹ ವಾಗ್ದಾಳಿ ನಡೆಸಿದರು.

ಮೈಸೂರು-ಕೊಡಗು ಕ್ಷೇತ್ರದಲ್ಲಿ ಬೆಳಗ್ಗೆ 11 ಗಂಟೆಗೆ ಶೇಕಡಾ 25.01 ರಷ್ಟು ಮತದಾನವಾಗಿದೆ. ಗ್ರಾಮಾಂತರ ಪ್ರದೇಶಗಳಲ್ಲಿ ಅದರಲ್ಲೂ ಮಹಿಳೆಯರು ಅತಿ ಹೆಚ್ಚಿನ ಸಂಖ್ಯೆಯಲ್ಲಿ ಮತಗಟ್ಟೆಗಳಿಗೆ ಬಂದು ತಮ್ಮ ಹಕ್ಕು ಚಲಾಯಿಸಿರುವುದು ಕಂಡುಬಂತು.