ಬೆಳಗಾವಿ : ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಇಲ್ಲ ಎಂದು ಹೈಕಮಾಂಡ್ ಸ್ಪಷ್ಟವಾಗಿ ಹೇಳಿದೆ ಎನ್ನುವ ಮೂಲಕ ಸಿಎಂ ಪುತ್ರ ಪರಿಷತ್ ಸದಸ್ಯ ಯತೀಂದ್ರ ಸಿದ್ದರಾಮಯ್ಯ ಮತ್ತೆ ಹೊಸ ಬಾಂಬ್ ಸಿಡಿಸಿದ್ದಾರೆ.
ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಯತೀಂದ್ರ, ನನ್ನ ತಂದೆಯೇ 5 ವರ್ಷ ಮುಖ್ಯಮಂತ್ರಿ ಆಗಿರುತ್ತಾರೆ. ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಇಲ್ಲ ಎಂದು ಸ್ಪಷ್ಟವಾಗಿ ಹೇಳಿದ್ದಾರೆ. ಕುರ್ಚಿ ಕಿತ್ತಾಟದ ಬಗ್ಗೆ ಯಾರೂ ಬಹಿರಂಗ ಹೇಳಿಕೆ ನೀಡದಂತೆ ಸಿಎಂ ಸೂಚಿಸಿದ್ದರೂ, ಪುತ್ರ ಮತ್ತೆ ಈ ವಿಚಾರವನ್ನು ಕೆದಕಿ ಉರಿಯುವ ಬೆಂಕಿಗೆ ತುಪ್ಪ ಸುರಿದಿದ್ದಾರೆ.
ಸಿಎಂ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಮಧ್ಯೆ ಎರಡು ಬ್ರೇಕ್‌ಫಾಸ್ಟ್ ಮೀಟಿಂಗ್ ನಡೆದಿತ್ತು. ಡಿಕೆಶಿ ಮನೆಗೆ ಆಗಮಿಸಿ ಪ್ರತಿಕ್ರಿಯಿಸಿದ್ದ ಸಿಎಂ ಹೈಕಮಾಂಡ್ ಹೇಳುವವರೆಗೆ ನಾನೇ ಸಿಎಂ ಆಗಿರುತ್ತೇನೆ ಎಂದು ತಿಳಿಸಿದ ನಂತರ ಈ ವಿಚಾರ ಸ್ವಲ್ಪ ತಣ್ಣಗಾಗಿತ್ತು. ಆದರೆ ಪುತ್ರ ಮತ್ತೆ ತಂದೆಯ ಪರ ಬ್ಯಾಟ್ ಬೀಸಿ ಚರ್ಚೆಗೆ ಗ್ರಾಸವಾಗಿದ್ದಾರೆ.














