Saval TV on YouTube
ಕುಟುಂಬದ ಸದಸ್ಯರು ಈಗಾಗಲೇ ಸರ್ಕಾರದ ಅಧೀನದ ಸಂಸ್ಥೆಯಲ್ಲಿ ನೌಕರನಾಗಿ ಕಾರ್ಯನಿರ್ವಹಿಸುತ್ತಿದ್ದರೆ ಅದೇ ಕುಟುಂಬದ ಮತ್ತೊಬ್ಬರಿಗೆ ಅದೇ ಸಂಸ್ಥೆಯಲ್ಲಿ ಅನುಕಂಪದ ಆಧಾರದಲ್ಲಿ ಉದ್ಯೋಗ ನೀಡಲಾಗದು ಎಂದು ಹೈಕೋರ್ಟ್ ಆದೇಶಿಸಿದೆ.
ಅನುಕಂಪದ ಆಧಾರದಲ್ಲಿ ಉದ್ಯೋಗ ಕಲ್ಪಿಸಲು ನಿರಾಕರಿಸಿದ ಕರ್ನಾಟಕ ವಿದ್ಯುತ್ ಸರಬರಾಜು ಮಂಡಳಿಯ ಕ್ರಮ ಪ್ರಶ್ನಿಸಿ ಬೆಂಗಳೂರಿನ ಉಲ್ಲಾಳ ಮುಖ್ಯ ರಸ್ತೆಯ ರಂಗನಾಥ ಸಲ್ಲಿಸಿದ ಮೇಲ್ಮನವಿಯ ವಿಚಾರಣೆ ನಡೆಸಿದ ನ್ಯಾಯ ಮೂರ್ತಿ ಅಶೋಕ್ ಆರಾಧೆ ನೇತೃತ್ವದ ಬಾಗಿ ವಿಭಾಗಿಯ ಪೀಠ, ಈ ಆದೇಶ ಮಾಡಿದೆ.
“ಅನುಕಂಪದ ಆಧಾರದ ಮೇಲೆ ಉದ್ಯೋಗ ಪಡೆಯುವುದು ಹಕ್ಕು ಅಲ್ಲ” ಎಂದು ಇದೇ ವೇಳೆ ಸ್ಪಷ್ಟಪಡಿಸಿರುವ ವಿಭಾಗಿಯ ಪೀಠ ಮೇಲ್ಮನವಿದಾರರ ಸಹೋದರ ಈಗಾಗಲೇ ಕೆಪಿಟಿಸಿಎಲ್ ನಲ್ಲಿ ಉದ್ಯೋಗ ಮಾಡುತ್ತಿದ್ದಾರೆ. ರಂಗನಾಥಗೂ ಅದೇ ಸಂಸ್ಥೆಯಲ್ಲಿ ಅನುಕಂಪದ ಆಧಾರದಲ್ಲಿ ಮತ್ತೊಂದು ಉದ್ಯೋಗ ನೀಡಲಾಗದು ಎಂದು ಅಭಿಪ್ರಾಯಪಟ್ಟು ಮೇಲ್ಮನವಿ ವಜಗೊಳಿಸಿದೆ.