ಬೆಳಗಾವಿ: ರಾಜ್ಯದಲ್ಲಿ ಯಾವುದೇ ಆರ್ಥಿಕ ಸಮಸ್ಯೆ ಇಲ್ಲ ಜನರಿಂದ ತೆರಿಗೆ ಸಂಗ್ರಹ ಆಗುತ್ತಿದೆ. ಜನ ತೆರಿಗೆಯನ್ನು ಕಟ್ಟುತ್ತಿದ್ದಾರೆ. ಹಣದ ಕೊರತೆ ಇದ್ದರೆ ಸರ್ಕಾರ ಯಾಕೆ ನಡೆಸುತ್ತಿದ್ದಾರೆ ಎಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಪ್ರಶ್ನಿಸಿದರು.
ಬೆಳಗಾವಿಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಹೆಚ್.ಡಿ ಕುಮಾರಸ್ವಾಮಿ, ರಾಜ್ಯದಲ್ಲಿ ಈ ಬಾರಿ ಸರಿಯಾಗಿ ಮಳೆಯಾಗದೇ ರೈತರು ತೀವ್ರ ಸಂಕಷ್ಟ ಎದುರಿಸುತ್ತಿದ್ದಾರೆ. ಬೆಳೆ ಇಲ್ಲದೇ ರೈತರು ಬೀದಿಗೆ ಬರುವಂತ ಪರಿಸ್ಥಿತಿ ನಿರ್ಮಾಣವಾಗಿದೆ. ಈ ವಿಷಯದ ಕುರಿತಾಗಿ ಜೆಡಿಎಸ್ ಬರ ಅಧ್ಯಯನ ನಡೆಸಿ ರಾಜಪಾಲರಿಗೆ ವರದಿ ಸಲ್ಲಿಸಿದ್ದು ಸದನದಲ್ಲಿ ಚರ್ಚಿಸುವುದಾಗಿ ತಿಳಿಸಿದರು.
ರಾಜ್ಯ ಸರ್ಕಾರದ ವೈಫಲ್ಯ ಕುರಿತು ಸದನದಲ್ಲಿ ಮಾತನಾಡುತ್ತೇನೆ. ರೈತರಿಗೆ ಈ ಸರ್ಕಾರದಿಂದ ಯಾವುದೇ ರೀತಿ ಸ್ಪಂದನೆ ಸಿಗುತ್ತಿಲ್ಲ ಎಂದು ಹೆಚ್.ಡಿ ಕುಮಾರಸ್ವಾಮಿ ಕಿಡಿಕಾರಿದರು.
Saval TV on YouTube