ಮನೆ ರಾಜಕೀಯ ಬಿಜೆಪಿಯಲ್ಲಿ ಯಡಿಯೂರಪ್ಪ ಅವರನ್ನು ಬಿಟ್ಟು ಬೇರೆ  ನಾಯಕರಿಲ್ಲ: ಸಿದ್ದರಾಮಯ್ಯ

ಬಿಜೆಪಿಯಲ್ಲಿ ಯಡಿಯೂರಪ್ಪ ಅವರನ್ನು ಬಿಟ್ಟು ಬೇರೆ  ನಾಯಕರಿಲ್ಲ: ಸಿದ್ದರಾಮಯ್ಯ

0

ಚಿತ್ರದುರ್ಗ(Chitradurga):  ಯಡಿಯೂರಪ್ಪ ಅವರನ್ನು ಬಿಟ್ಟು ಬಿಜೆಪಿಯಲ್ಲಿನಾಯಕರೇ ಇಲ್ಲ. ಅವರನ್ನು ಬಿಟ್ಟರೆ ಬಿಜೆಪಿ ಪ್ರಚಾರಕ್ಕೆ ಹೋಗಲು ಸಾಧ್ಯವಿಲ್ಲ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದರು.

ಯಾತ್ರೆಗೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ನಾಯಕರಲ್ಲಿ ಹೊಂದಾಣಿಕೆ ಇಲ್ಲ ಎಂಬುದು ಯಾರು ಹೇಳಿದ್ದು? ಬಸವನಗೌಡ ಪಾಟೀಲ್ ಯತ್ನಾಳ ಹಾಗೂ ಎಚ್.ವಿಶ್ವನಾಥ್ ಬಾಯಿಗೆ ಬಂದಂತೆ ಮಾತನಾಡುತ್ತಿರುವುದನ್ನು ನೋಡಿದರೆ ಎಲ್ಲ ಅರ್ಥವಾಗುತ್ತದೆ ಎಂದು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ ಭಾರತ್ ಜೋಡೊ ಯಾತ್ರೆಯನ್ನು ಕಂಡು ಬಿಜೆಪಿಗೆ ನಡುಕ ಶುರುವಾಗಿದೆ. ಬಿಜೆಪಿ ನಾಯಕರು ಭಯದಲ್ಲಿ ಬಾಯಿಗೆ ಬಂದಂತೆ ಮಾತನಾಡುತ್ತಿದ್ದಾರೆ ಎಂದು ಅಭಿಪ್ರಾಯಪಟ್ಟರು.

ನನ್ನನ್ನು ಕಂಡರೆ ಬಿಜೆಪಿ ನಾಯಕರಿಗೆ ಭಯ. ಬಲಶಾಲಿಯಾದವರಿಗೆ ಶತ್ರುಗಳು ಹೆಚ್ಚು. ಬಾಯಿಗೆ ಬಂದಂತೆ ಮಾತನಾಡುವುದನ್ನು ಬಿಟ್ಟು ವಿಷಯಾಧಾರಿತ ಚರ್ಚೆಗೆ ಬನ್ನಿ. ವ್ಯಾಪಕವಾಗಿರುವ ಭಷ್ಟಾಚಾರದ ಕುರಿತು ಮಾತನಾಡಿ ಎಂದರು.