ಕಲಬುರುಗಿ: ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಪ್ರಿಯಾಂಕ್ ಖರ್ಗೆ ರಾಜೀನಾಮೆ ಕೊಡುವ ಪ್ರಶ್ನೆಯೇ ಇಲ್ಲ ಎಂದು ವೈದ್ಯಕೀಯ ಶಿಕ್ಷಣ ಸಚಿವ ಶರಣ ಪ್ರಕಾಶ್ ಪಾಟೀಲ್ ತಿಳಿಸಿದ್ದಾರೆ.
ಸಚಿವ ಪ್ರಿಯಾಂಕ್ ಖರ್ಗೆ ರಾಜೀನಾಮೆಗೆ ಆಗ್ರಹಿಸಿದ ಬಿಜೆಪಿಗೆ ತಿರುಗೇಟು ನೀಡಿದ ಸಚಿವ ಶರಣಪ್ರಕಾಶ್ ಪಾಟೀಲ್, ಪ್ರಿಯಾಂಕ್ ಖರ್ಗೆ ಯಾಕೆ ರಾಜೀನಾಮೆ ಕೊಡಬೇಕು. ಪ್ರಿಯಾಂಕ್ ಖರ್ಗೆಗೂ ಸಚಿನ್ ಆತ್ಮಹತ್ಯೆಗೂ ಏನು ಸಂಬಂಧ? ಬಿಜೆಪಿಯವರಿಗೆ ಪ್ರಿಯಾಂಕ್ ಖರ್ಗೆ ಟಾರ್ಗೆಟ್. ಪ್ರಿಯಾಂಕ್ ಖರ್ಗೆ ರಾಜೀನಾಮೆ ಪ್ರಶ್ನೆಯೇ ಇಲ್ಲ ಎಂದರು.
ಬಿಜೆಪಿಗರಿಗೆ ಸಾರ್ವಜನಿಕ ಹಿತಾಸಕ್ತಿ ಇದೆಯಾ? ಬಿಜೆಪಿಯಷ್ಟು ಭ್ರಷ್ಟ ಸರ್ಕಾರ ಇನ್ನೊಂದಿಲ್ಲ. ಭ್ರಷ್ಟ ಬಿಜೆಪಿ ನಮಗೆ ಪಾಠ ಮಾಡಲು ಬರೋದು ವಿಪರ್ಯಾಸ. ವಿರೋಧ ಪಕ್ಷವಾಗಿ ಬಿಜೆಪಿ ವಿಫಲವಾಗಿದೆ ಎಂದು ಶರಣ ಪ್ರಕಾಶ್ ಪಾಟೀಲ್ ಕಿಡಿಕಾರಿದರು.














