ಮನೆ ರಾಜ್ಯ ದೇಶದಲ್ಲಿ ತುರ್ತು ಪರಿಸ್ಥಿತಿ ಜಾರಿಯಿಲ್ಲ, ತಪ್ಪು ಸರಿಪಡಿಸಬಹುದು: ಸಿ.ಟಿ.ರವಿ

ದೇಶದಲ್ಲಿ ತುರ್ತು ಪರಿಸ್ಥಿತಿ ಜಾರಿಯಿಲ್ಲ, ತಪ್ಪು ಸರಿಪಡಿಸಬಹುದು: ಸಿ.ಟಿ.ರವಿ

0

ಬೆಂಗಳೂರು(Bengaluru): ಈಗ ದೇಶದಲ್ಲಿ ತುರ್ತು ಪರಿಸ್ಥಿತಿ ಜಾರಿಯಲ್ಲಿಲ್ಲ‌. ತಪ್ಪುಗಳಾಗಿದ್ದರೆ ಸರಿಪಡಿಸಲು ಅವಕಾಶ ಇದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಹೇಳಿದರು.

ಇಂದು ರಾಷ್ಟ್ರಪತಿ ಚುನಾವಣೆಯಲ್ಲಿ ಮತದಾನ ಮಾಡಿದ ಬಳಿಕ ಮೊಸರು, ಮಂಡಕ್ಕಿ ಸೇರಿದಂತೆ ಕೆಲವು ವಸ್ತುಗಳ ಮೇಲೆ ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ವಿಧಿಸಿರುವ ಕುರಿತು ಪ್ರತಿಕ್ರಿಯಿಸಿ, ಜಿಎಸ್ ಟಿ ವಿಧಿಸಿರುವುದು ಕೇಂದ್ರ ಸರ್ಕಾರದ ಏಕಪಕ್ಷೀಯ ತೀರ್ಮಾನ ಅಲ್ಲ. ಜಿಎಸ್‌ಟಿ ಮಂಡಳಿಯಲ್ಲಿ ಎಲ್ಲ ರಾಜ್ಯಗಳ ಪ್ರತಿನಿಧಿಗಳೂ ಇದ್ದಾರೆ. ಮಂಡಳಿಯ ಸಭೆಯಲ್ಲಿ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗಿದೆ ಎಂದರು.

ರಾಷ್ಟ್ರಪತಿ ಚುನಾವಣೆಯಲ್ಲಿ ಕೆಲವು ಪಕ್ಷಗಳ ಮುಖವಾಡ ಕಳಚಿ ಬಿದ್ದಿದೆ. ಎನ್‌ಡಿಎ ಮೈತ್ರಿಕೂಟ ಆದಿವಾಸಿ ಮಹಿಳೆಯನ್ನು ರಾಷ್ಟ್ರಪತಿ ಅಭ್ಯರ್ಥಿ ಮಾಡಿದರೂ ವಿರೋಧಿಸುತ್ತಿದ್ದಾರೆ. ಸಿದ್ದರಾಮಯ್ಯ ಅವರ ಅಹಿಂದ ಸಿದ್ಧಾಂತ ಎಲ್ಲಿ ಹೋಯಿತು ಎಂದು ಪ್ರಶ್ನಿಸಿದರು.

ಹಿಂದಿನ ಲೇಖನರಾಷ್ಟ್ರಪತಿ ಚುನಾವಣೆ: ಪ್ರಧಾನಿ ನರೇಂದ್ರ ಮೋದಿ ಮತ ಚಲಾವಣೆ
ಮುಂದಿನ ಲೇಖನಹಿಂದೂ ಧರ್ಮದಲ್ಲಿ ಅರಿಶಿಣ, ಕುಂಕುಮಕ್ಕೆ ವಿಶೇಷ ಸ್ಥಾನವಿದೆ: ರೇಖಾ ಶ್ರೀನಿವಾಸ್