ಮನೆ ರಾಜಕೀಯ ನಿಮ್ಮ ಕಾಂಗ್ರೆಸ್ಸಿನ ಗುಂಡಿಯಲ್ಲಿ ನೀರಿಲ್ಲ: ಡಿಕೆಶಿಗೆ ಸಿಎಂ ಬೊಮ್ಮಾಯಿ ತಿರುಗೇಟು

ನಿಮ್ಮ ಕಾಂಗ್ರೆಸ್ಸಿನ ಗುಂಡಿಯಲ್ಲಿ ನೀರಿಲ್ಲ: ಡಿಕೆಶಿಗೆ ಸಿಎಂ ಬೊಮ್ಮಾಯಿ ತಿರುಗೇಟು

0

ಬೆಂಗಳೂರು: ಮೊದಲು ನಿಮ್ಮ ಕಾಂಗ್ರೆಸ್ಸಿನ ಗುಂಡಿಯಲ್ಲಿ ನೀರಿಲ್ಲ. ಅದರ ಬಗ್ಗೆ ಚಿಂತನೆ ಮಾಡಿ, ನಿಮ್ಮ ಹೇಳಿಕೆನ್ನು ಸವಾಲಾಗಿ ಸ್ವೀಕರಿಸಿದ್ದೇವೆ. ಮೇ 13 ಕ್ಕೆ ಯಾರ್ ಯಾರ ಡ್ಯಾಮ್ ನಲ್ಲಿ ಎಷ್ಟು ನೀರಿದೆ ಅಂತ ಗೊತ್ತಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ತಿರುಗೇಟು ನೀಡಿದ್ದಾರೆ.

Join Our Whatsapp Group

ಈ ಕುರಿತು ಟ್ವೀಟ್ ಮಾಡಿರುವ ಅವರು, ಡಿ.ಕೆ.ಶಿವಕುಮಾರ್ ಅವರೇ ಲಿಂಗಾಯತ ಡ್ಯಾಮಿನ ಬಗ್ಗೆ ಮಾತನಾಡಿದ್ದೀರಿ. ಇದು ಎಷ್ಟು ಗಟ್ಟಿ ಇದೆ ಎಂದು ಅರಿವು ನಿಮಗಿಲ್ಲ. ನೀವು ಅದನ್ನು ಒಡೆಯುವ ಭ್ರಮೆಯಲ್ಲಿದ್ದೀರಿ. 2018 ರಲ್ಲಿ ನಿಮ್ಮ ಸರ್ಕಾರ ಇದ್ದು ಇದನ್ನು ಒಡೆಯಲು ಸಾಧ್ಯವಾಗಿಲ್ಲ. ಈಗೇನು ಮಾಡಲು ಸಾಧ್ಯ. ನಿಮ್ಮ ಹೇಳಿಕೆಯಿಂದ ಲಿಂಗಾಯತ ಧರ್ಮವನ್ನು ಒಡೆಯುವ ಮತ್ತೊಂದು ಹುನ್ನಾರ ಬಯಲಾಗಿದೆ ಎಂದು ಆಕ್ರೋಶ ಹೊರ ಹಾಕಿದೆ.

ಮಾಜಿ ಸಿಎಂ ಜಗದೀಶ್ ಶಟ್ಟರ್ ಮತ್ತು ಮಾಜಿ ಡಿಸಿಎಂ ಲಕ್ಷ್ಮಣ್ ಸವದಿ ಅವರು ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿದ್ದು, ಬಿಜೆಪಿಯಲ್ಲಿ ಯಡಿಯೂರಪ್ಪ ಸೇರಿ ಲಿಂಗಾಯತ ನಾಯಕರನ್ನು ಮೂಲೆಗುಂಪು ಮಾಡಲಾಗುತ್ತಿದೆ ಎಂದು ಕಾಂಗ್ರೆಸ್ ನಿರಂತರ ಆರೋಪ ಮಾಡುತ್ತಿದೆ.

ಹಿಂದಿನ ಲೇಖನ‘ರಾಘು’: ಸೋಲೋ ಆ್ಯಕ್ಟರ್ ಗೆಲ್ಲೋ ಸಿನಿಮಾ
ಮುಂದಿನ ಲೇಖನCSKvSRH  ಟಾಸ್‌ ಗೆದ್ದ ಚೆನ್ನೈ, ಬೌಲಿಂಗ್ ಆಯ್ಕೆ