ತುಮಕೂರು: ತೋಟದ ಒಂಟಿ ಮನೆಯಲ್ಲಿದ್ದ ದಂಪತಿ ಮೇಲೆ ಹಲ್ಲೆ ನಡೆಸಿ, ಮನೆಯಲ್ಲಿದ್ದ ವಸ್ತುಗಳನ್ನು ಕಳ್ಳತನ ಮಾಡಿರುವ ಘಟನೆ ಜಿಲ್ಲೆಯ ತುರುವೇಕೆರೆ ತಾಲೂಕಿನ ಬಾಣಸಂದ್ರ ಬಳಿಯ ಕಳ್ಳನಗಿಡ ಪ್ರದೇಶದಲ್ಲಿ ನಡೆದಿದೆ.
ಕೃಷ್ಣೇಗೌಡ ಎಂಬುವರ ಮನೆ ಮೇಲೆ 9ಕ್ಕೂ ಹೆಚ್ಚು ಕಳ್ಳರ ಗ್ಯಾಂಗ್ ದಾಳಿ ಮಾಡಿದೆ. ಈ ವೇಳೆ ಕೃಷ್ಣೇಗೌಡ ಪತ್ನಿ ಇಂದ್ರಮ್ಮರ ಬಾಯಿಗೆ ಬಟ್ಟೆ ತುರುಕಿ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿದ್ದಾರೆ.
ಇಂದ್ರಮ್ಮ ಕೊರಳಲ್ಲಿದ್ದ ಮಾಂಗಲ್ಯ ಸರ, ಓಲೆ ಹಾಗೂ ಮನೆಯಲ್ಲಿದ್ದ 20,000 ನಗದನ್ನು ದೋಚಿ ಪರಾರಿಯಾಗಿದ್ದಾರೆ. ಹಲ್ಲೆಗೊಳಗಾಗಿರುವ ದಂಪತಿ ತುರುವೇಕೆರೆ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ದಂಡಿನಶಿವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Saval TV on YouTube