ಮನೆ ರಾಜ್ಯ ಹಣ ಕೊಟ್ಟು ಜನರನ್ನು ಕರೆಸಿ, ಘೋಷಣೆ ಕೂಗಿಸಿದ್ದಾರೆ: ಸಿದ್ದರಾಮಯ್ಯ

ಹಣ ಕೊಟ್ಟು ಜನರನ್ನು ಕರೆಸಿ, ಘೋಷಣೆ ಕೂಗಿಸಿದ್ದಾರೆ: ಸಿದ್ದರಾಮಯ್ಯ

0

ಮಡಿಕೇರಿ(Madikeri): ಸರ್ಕಾರ ಸತ್ತಿದೆ. ಹಾಗಾಗಿ ಹಣ ಕೊಟ್ಟು ಜನರನ್ನು ಕರೆದುಕೊಂಡು ಬಂದು ನನ್ನ ವಿರುದ್ಧ ಘೋಷಣೆ ಕೂಗಿಸಿದ್ದಾರೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು.

ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನನ್ನ ವಿರುದ್ಧ ಪ್ರತಿಭಟನೆ ಮಾಡಿದ್ದು ಹೇಡಿಗಳ ಕೆಲಸ. ಕೊಡಗಿನಲ್ಲಿ ಸಮರ್ಪಕವಾಗಿ ಪರಿಹಾರ ನೀಡಿಲ್ಲ. ಡಿ.ಸಿ ಕಚೇರಿ ತಡೆಗೋಡೆ ಕಳಪೆಯಾಗಿದೆ. ಇದು ನನಗೆ ಗೊತ್ತಾಗಬಾರದು ಎಂದೇ ಪ್ರತಿಭಟನೆ ಮಾಡಿದ್ದಾರೆ ಎಂದು ತಿಳಿಸಿದರು‌.

ಅತಿವೃಷ್ಟಿಯಿಂದಾಗಿ ಹಾನಿಗೊಳಗಾದ ಕೊಡಗಿನ ಮದೆನಾಡು ಕೊಯನಾಡು ಪ್ರದೇಶಗಳಿಗೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಗುರುವಾರ ಭೇಟಿ ನೀಡಿ ಸಂತ್ರಸ್ತರ ಅಹವಾಲು ಆಲಿಸಿದರು.‌ ಕೆಲವು ಸಂತ್ರಸ್ತರು ತಮಗೆ ಸರ್ಕಾರ ನೀಡಿದ ಪರಿಹಾರ ಏನೇನೂ ಸಾಲದು ಎಂದು ಅಳಲು ತೋಡಿಕೊಂಡರು‌.

ಮಳೆ ಹಾನಿ ಪ್ರದೇಶಗಳನ್ನು ವೀಕ್ಷಿಸಿ ಮಡಿಕೇರಿಗೆ ಬಂದ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಕಾರಿಗೆ ಜನರಲ್ ತಿಮ್ಮಯ್ಯ ವೃತ್ತದಲ್ಲಿ ಕಪ್ಪುಬಾವುಟ ಪ್ರದರ್ಶಿಸಿದ ಬಿಜೆಪಿ ಕಾರ್ಯಕರ್ತರು ಕೋಳಿಮೊಟ್ಟೆ ಎಸೆದು ಆಕ್ರೋಶ ವ್ಯಕ್ತಪಡಿಸಿದರು.

ಇದನ್ನು ಖಂಡಿಸಿದ ಕಾಂಗ್ರೆಸ್ ಕಾರ್ಯಕರ್ತರು ವೃತ್ತದ ಮತ್ತೊಂದು ಪಾರ್ಶ್ವದಲ್ಲಿ ಪ್ರತಿಭಟನೆ ಕುಳಿತರು.‌ ಸುಮಾರು ಅರ್ಧಗಂಟೆಗಳ ಕಾಲ ಉಭಯ ಕಾರ್ಯಕರ್ತರು ಒಂದೆ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.

ಹಿಂದಿನ ಲೇಖನಗಣೇಶಮೂರ್ತಿ ಪಕ್ಕ ಸಾವರ್ಕರ್ ಪೋಟೋ ಇಡುತ್ತೇವೆ ತಾಕತ್ತಿದ್ದಾರೆ ತಡೆಯಿರಿ: ಪ್ರಮೋದ್ ಮುತಾಲಿಕ್
ಮುಂದಿನ ಲೇಖನಅನ್ನದಾತರ ಆರೋಗ್ಯ ಕಾಪಾಡುವುದು ಪ್ರತಿಯೊಬ್ಬರ ಕರ್ತವ್ಯ: ಕುರುಬೂರು ಶಾಂತಕುಮಾರ್