ಮನೆ ರಾಜ್ಯ ಪಕ್ಷಕ್ಕೆ ಬರುವಾಗ ಜಾಮೂನು ಕೊಡುತ್ತಾರೆ, ಅಧಿಕಾರ ಮುಗಿದ ಮೇಲೆ ವಿಷ ಕೊಡುತ್ತಾರೆ: ಬಿಜೆಪಿ ವಿರುದ್ಧ ಎಸ್...

ಪಕ್ಷಕ್ಕೆ ಬರುವಾಗ ಜಾಮೂನು ಕೊಡುತ್ತಾರೆ, ಅಧಿಕಾರ ಮುಗಿದ ಮೇಲೆ ವಿಷ ಕೊಡುತ್ತಾರೆ: ಬಿಜೆಪಿ ವಿರುದ್ಧ ಎಸ್ ​ಟಿ ಸೋಮಶೇಖರ್ ಕಿಡಿ

0

ಮೈಸೂರು: ಪಕ್ಷಕ್ಕೆ ಬರುವಾಗ ಬಿಜೆಪಿಯವರು ಜಾಮೂನು ಕೊಡುತ್ತಾರೆ, ಅಧಿಕಾರ ಮುಗಿದ ಮೇಲೆ ವಿಷ ಕೊಡುತ್ತಾರೆ ಎಂದು ಸ್ವಪಕ್ಷದ ವಿರುದ್ಧವೇ ಎಸ್ ​ಟಿ ಸೋಮಶೇಖರ್ ಸ್ವಪಕ್ಷದ ವಿರುದ್ಧ ಮತ್ತೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮೈಸೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಸೋಮಶೇಖರ್, ನಾನು ಕಾಂಗ್ರೆಸ್​ನಲ್ಲಿದ್ದವನು, ಅವರಾಗಿಯೇ ಪಕ್ಷಕ್ಕೆ ಸೇರಿಸಿಕೊಂಡರು. ಈಗ ಎಸ್​ ಟಿಎಸ್​ ಹೋದರೆ ಹೋಗಲಿ ಎಂದು ಮಾತನಾಡುತ್ತಿದ್ದಾರೆ. ನನ್ನನ್ನು ಪಕ್ಷದಿಂದ ಬಿಡಿಸಲು ರೆಡಿಯಾಗಿದ್ದಾರೆ.​ ನನ್ನ ಕ್ಷೇತ್ರದ ಅಭಿವೃದ್ಧಿಗೆ ಸಿಎಂ, ಡಿಸಿಎಂ ಬಳಿ ಹೋಗುತ್ತೇನೆ ತಪ್ಪೇನು? ನಾನು ಸಿಎಂ, ಡಿಸಿಎಂ ಹೊಗಳುವುದನ್ನು ಬಿಜೆಪಿಯವರು ಸಹಿಸುತ್ತಿಲ್ಲ. ಗ್ಯಾರಂಟಿ ಯೋಜನೆಗಳಿಗೆ ಏಕೆ ಉತ್ತೇಜನ ನೀಡ್ತೀರಿ ಅಂತಾ ಪ್ರಶ್ನಿಸ್ತಾರೆ. ನನ್ನ ಕ್ಷೇತ್ರದ ಜನರಿಗೆ ಒಳ್ಳೆಯದು ಮಾಡುವುದು ಬೇಡ್ವಾ? ಎಂದು ಪ್ರಶ್ನಿಸಿದರು.

ಇನ್ನು ಬಿಜೆಪಿ ಬರ ಅಧ್ಯಯನಕ್ಕೆ ಎಸ್​.ಟಿ.ಸೋಮಶೇಖರ್ ವಿರೋಧ ವ್ಯಕ್ತಪಡಿಸಿದ್ದು, ಕೇಂದ್ರದ ಅಧಿಕಾರಿಗಳು ಬರ ಅಧ್ಯಯನ ಮಾಡಿ ಹೋಗಿದ್ದಾರೆ. ರಾಜ್ಯ ನಾಯಕರು ಕೇಂದ್ರಕ್ಕೆ ಮನವರಿಕೆ ಮಾಡುವ ಕೆಲಸ ಮಾಡಲಿ. ಅದನ್ನು ಬಿಟ್ಟು ಇಲ್ಲಿ ಪ್ರವಾಸ ಮಾಡಿದರೆ ಏನು ಪ್ರಯೋಜನ? ನಿಮ್ಮ ಬರ ಅಧ್ಯಯನ ಪ್ರವಾಸದಿಂದ ಯಾವ ಪ್ರಯೋಜನವಿಲ್ಲ ಎಂದು ಕಿಡಿಕಾರಿದ್ದಾರೆ.

ಇನ್ನು ಇದೇ ವೇಳೆ ನಾನು ಬಿಜೆಪಿ ಪಕ್ಷ ಬಿಟ್ಟು ಹೋಗಲ್ಲ ಎಂದು ಸ್ಪಷ್ಟಪಡಿಸಿರುವ ಅವರು, ನಾನು ಮಾನಸಿಕವಾಗಿ ದೈಹಿಕವಾಗಿ ನಾನು ಪಕ್ಷದಲ್ಲೆ ಇದ್ದೇನೆ. ಕಾಂಗ್ರೆಸ್ ಸೇರುತ್ತಾರೆ ಎಂಬುದ್ದೆಲ್ಲ ಊಹಾಪೋಹಗಳು. ನಾನು ಯಡಿಯೂರಪ್ಪ ಮಾತು ನಂಬಿ ಬಿಜೆಪಿಯಲ್ಲಿದ್ದೇ‌ನೆ. ಆದ್ರೆ ಇವರೆ ಪಕ್ಷದಿಂದ ಓಡಿಸುವ ಕೆಲಸ ಮಾಡುತ್ತಿದ್ದಾರೆ. ಕಳೆದ ಚುನಾವಣೆಯಲ್ಲಿ ನಮ್ಮ ಪಕ್ಷದವರೆ ನನ್ನ ವಿರುದ್ಧ ಕೆಲಸ ಮಾಡಿದ್ರು. ಈ ಬಗ್ಗೆ ದಾಖಲೆ ಸಮೇತ ದೂರು ಕೊಟ್ಟೆ, ಆದರೆ ಪ್ರಯೋಜನವಾಗಲಿಲ್ಲ. ಅವರ ಹುಟ್ಟಹಬ್ಬವನ್ನೆ ಕ್ಷೇತ್ರದಲ್ಲಿ ಅದ್ದೂರಿಯಾಗಿ ಮಾಡಿದ್ರು ಇದೆಲ್ಲ ಏನ್ ಅರ್ಥ ಎಂದು ಅಸಮಾಧಾನ ಹೊರಹಾಕಿದರು.

ಬಸವರಾಜು ಬೊಮ್ಮಯಿ ಅವರು ಮುಖ್ಯಮಂತ್ರಿಯಾದಾಗ ನನ್ನನ್ನು ಯಡಿಯೂರಪ್ಪ ಉಳಿಸಿಕೊಂಡರು. ಯಡಿಯೂರಪ್ಪನವರ ವಿರುದ್ಧ ಐದಾರು ಜನರು ಮಾತನಾಡಿದ್ರು. ಅವರ ವಿರುದ್ಧ ಪಕ್ಷದಲ್ಲಿ ಕ್ರಮ ತೆಗೆದುಕೊಳ್ಳಲಿಲ್ಲ. ಇದು ಕೂಡ ಪಕ್ಷದ ಹಿನ್ನೆಡೆಗೆ ಕಾರಣ ಎಂದು ಯಡಿಯೂರಪ್ಪರನ್ನ ಪಕ್ಷದಲ್ಲಿ ಮೂಲೆಗುಂಪು ಮಾಡಿರುವುದಕ್ಕೆ ಎಸ್.ಟಿ.ಸೋಮಶೇಖರ್ ಅಸಮಾಧಾನ ವ್ಯಕ್ತಪಡಿಸಿದರು.

ಇನ್ನು ಸೋಮಶೇಖರ್ ಕಾಂಗ್ರೆಸ್​ಗೆ ಹೋಗುವುದಾದರೆ ಹೋಗಲಿ ಎನ್ನುವ ಕೆಎಸ್ ಈಶ್ವರಪ್ಪ ಹೇಳಿಕೆಗೆ ಸ್ವತಃ ಎಸ್ ​ಟಿ ಸೋಮಶೇಖರ್ ಗರಂ ಆಗಿದ್ದು, ನನ್ನನ್ನು ಪಕ್ಷದಿಂದ ಹೋಗು ಅಂತಾ ಹೇಳಲು ಈಶ್ವರಪ್ಪ ಯಾರು? ಬೆಲೆ ಇಲ್ಲದವರ ಹೇಳಿಕೆಗಳಿಗೆ ತಲೆಕೆಡಿಸಿಕೊಳ್ಳುವುದಿಲ್ಲ.​ ಈಶ್ವರಪ್ಪ ಏನು ರಾಜ್ಯಾಧ್ಯಕ್ಷನಾ? ಈಶ್ವರಪ್ಪ ನಂಬಿ ಪಕ್ಷಕ್ಕೆ ಬರಲಿಲ್ಲ. ಯಡಿಯೂರಪ್ಪರನ್ನು ನಂಬಿ ಬಿಜೆಪಿಗೆ ಸೇರಿದ್ದೇನೆ ಎಂದು ಈಶ್ವರಪ್ಪ ಅವರಿಗೆ ತಿರುಗೇಟು ನೀಡಿದರು.