ಮನೆ ರಾಜ್ಯ ಈ ಬಾರಿ ಅದ್ಧೂರಿಯಾಗಿ ಮೈಸೂರು ದಸರಾ ಆಚರಣೆಗೆ ಚಿಂತನೆ: ಸಚಿವ ಹೆಚ್.ಸಿ.ಮಹದೇವಪ್ಪ

ಈ ಬಾರಿ ಅದ್ಧೂರಿಯಾಗಿ ಮೈಸೂರು ದಸರಾ ಆಚರಣೆಗೆ ಚಿಂತನೆ: ಸಚಿವ ಹೆಚ್.ಸಿ.ಮಹದೇವಪ್ಪ

0

ಮೈಸೂರು: ಈ ಬಾರಿ ಅದ್ಧೂರಿಯಾಗಿ ಮೈಸೂರು ದಸರಾ  ಮಹೋತ್ಸವ ಆಚರಿಸಲು ಚಿಂತನೆ ನಡೆಸಲಾಗಿದೆ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಹೆಚ್.ಸಿ.ಮಹದೇವಪ್ಪ ತಿಳಿಸಿದರು.

Join Our Whatsapp Group

ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ ನಡೆಸುವ ವಿಚಾರಕ್ಕೆ ಸಂಬಂಧಿಸಿದಂತೆ ಇಂದು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಸಚಿವ ಹೆಚ್.ಸಿ.ಮಹದೇವಪ್ಪ,  ಈ ಬಾರಿ ಅದ್ಧೂರಿಯಾಗಿ ದಸರಾ ಮಹೋತ್ಸವ ಆಚರಿಸಲು ಚಿಂತನೆ ನಡೆದಿದೆ. ಈ ಹಿಂದೆ ಕೊವಿಡ್​​ನಿಂದ ಜನ ಸಂಕಷ್ಟಕ್ಕೆ ಸಿಲುಕಿದ್ದರು. ಈಗ ರಾಜ್ಯ ಸುಭಿಕ್ಷವಾಗಿದೆ, ಹೊಸ ಸರ್ಕಾರ ಬಂದಿದೆ. ರಾಜ್ಯದಲ್ಲಿ ಉತ್ತಮ ಮಳೆಯಾಗುತ್ತಿದೆ. ಮೈಸೂರು ಸಂಸ್ಕೃತಿ, ರಾಜಪರಂಪರೆ ಉಳಿಸಿಕೊಂಡು ದಸರಾ ಆಚರಣೆ ಮಾಡಲಾಗುತ್ತದೆ. ದಸರಾ ಉನ್ನತಮಟ್ಟ ಸಮಿತಿ ಸಭೆಯಲ್ಲಿ ಈ ಬಗ್ಗೆ ಚರ್ಚಿಸಿ ನಿರ್ಧಾರ ಕೈಗೊಳ್ಳುತ್ತೇವೆ ಎಂದು ತಿಳಿಸಿದರು.

ಜುಲೈ 31 ರಂದು ಸಿಎಂ ಸಿದ್ಧರಾಮಯ್ಯ ನೇತೃತ್ವದಲ್ಲಿ ದಸರಾ ಉನ್ನತ ಮಟ್ಟದ ಸಭೆ ನಡೆಯಲಿದೆ.

ಹಿಂದಿನ ಲೇಖನಸಂಬಂಧದಲ್ಲಿ ಭಾವುಕತೆ ಇರಲಿ, ಭಾವನೆಗಳ ನಿಂದನೆ ಇದ್ದರೆ ಆ ಸಂಬಂಧಗಳಿಂದ ಹೊರಬನ್ನಿ
ಮುಂದಿನ ಲೇಖನಈ ಜ್ಯೂಸ್ ಕುಡಿದರೆ ಕೊಲೆಸ್ಟ್ರಾಲ್ ಕಡಿಮೆಯಾಗುತ್ತೆ