ಮನೆ ರಾಜಕೀಯ ಈ ಬಾರಿ ಹಳೆ ಮೈಸೂರು ಭಾಗದಲ್ಲಿ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ಸಿಎಂ ಬೊಮ್ಮಾಯಿ

ಈ ಬಾರಿ ಹಳೆ ಮೈಸೂರು ಭಾಗದಲ್ಲಿ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ಸಿಎಂ ಬೊಮ್ಮಾಯಿ

0

ಮೈಸೂರು(Mysuru): ಈ ಬಾರಿ ಚುನಾವಣೆಯಲ್ಲಿ ಹಳೆ ಮೈಸೂರು ಭಾಗದಲ್ಲಿ ಬಿಜೆಪಿ ಪಕ್ಷ ಅತಿ ಹೆಚ್ಚು ಕ್ಷೇತ್ರ ಗೆಲ್ಲಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ  ವಿಶ್ವಾಸ ವ್ಯಕ್ತಪಡಿಸಿದರು.

ಇಂದು ಮೈಸೂರು ಜಿಲ್ಲೆಗೆ ಪ್ರವಾಸ ಕೈಗೊಂಡಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಯಿ ಅವರು ಮಂಡಕಳ್ಳಿ ನಿಲ್ದಾಣ ದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು.

ಗುಜರಾತ್ ಚುನಾವಣಾ ನಂತರ ಮುಂದಿನ ಚುನಾವಣೆಗೆ ಹೋಗುವುದು ಕರ್ನಾಟಕ ರಾಜ್ಯ ಭಾರತೀಯ ಜನತಾ ಪಕ್ಷ ನಿರಂತರವಾಗಿ ಜನಸಂಪರ್ಕ ಪಕ್ಷ ಸಂಘಟನೆ ಮಾಡಿಕೊಂಡು ಬಂದಿದ್ದೇವೆ ಈಗ ಚುನಾವಣಾ ದೃಷ್ಟಿಯಿಂದ ಇವುಗಳನ್ನು ಹೆಚ್ಚು ಪರಿಣಾಮಕಾರಿಯಾಗಿ ಮಾಡಲಾಗುತ್ತಿದೆ ಎಂದರು.

ವಿವಿಧ ಸ್ತರಗಳಲ್ಲಿ ಕೋರ್ ಕಮಿಟಿ ಸೇರಿದಂತೆ ಕಳೆದೆರಡು ದಿನಗಳಿಂದೆ ದೆಹಲಿಯಲ್ಲಿ ಎಲ್ಲ ರಾಜ್ಯದ ಪದಾಧಿಕಾರಿಗಳ ಜೊತೆ ಸಭೆ ನಡೆಸಲಾಗಿದೆ ಈಗಾಗಿ ಎಲ್ಲ ರೀತಿಯಲ್ಲೂ ಸಿದ್ಧವಾಗಿದೆ.ಈ ಬಾರಿ ಭಾರತೀಯ ಜನತಾ ಪಕ್ಷಕ್ಕೆ ಬಹಳ ದೊಡ್ಡ ಸಂಖ್ಯೆಯಲ್ಲಿ ಶಾಸಕರ ಆಯ್ಕೆಯಾಗುತ್ತಾರೆ ಎಂದರು.

ಈ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎಸ್ ಟಿ ಸೋಮಶೇಖರ್, ಶಾಸಕ ಎಲ್ ನಾಗೇಂದ್ರ, ಶಾಸಕ ಹರ್ಷವರ್ಧನ್, ಮೈಸೂರು ಮಹಾನಗರ ಪಾಲಿಕೆ ಮೇಯರ್ ಶಿವಕುಮಾರ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು.