ಉಡುಪಿ: ದೇಶವನ್ನು 60 ವರ್ಷ ಲೂಟಿ ಮಾಡಿದವರು, ಇದೀಗ ಒಂದಾಗಿದ್ದಾರೆ. ಈ ಈಸ್ಟ್ ಇಂಡಿಯಾ ಕಂಪನಿಗೆ ಪ್ರಧಾನಿ ನರೇಂದ್ರ ಮೋದಿಯೇ ಟಾರ್ಗೆಟ್ ಎಂದು ಕೇಂದ್ರ ಸಚಿವೆ ಶೋಭಾ ಕರಂಧ್ಲಾಜೆ ಕಿಡಿಕಾರಿದ್ದಾರೆ.
ನಿನ್ನೆ ನಡೆದ ಸಭೆಯಲ್ಲಿ ವಿಪಕ್ಷಗಳ ಮೈತ್ರಿಕೂಟ INDIA ಎಂಬ ಹೆಸರಿಟ್ಟಿದ್ದು ಈ ವಿಚಾರಕ್ಕೆ ಸಂಬಂಧಿಸಿದಂತೆ ಟೀಕೆ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಮಾತನಾಡಿರುವ ಅವರು, ಕಳೆದ ಬಾರಿಯಂತೆ ಮತ್ತೆ ಬಿರುಸಿನ ಪ್ರಚಾರ ಶುರು ಮಾಡಿದ್ದಾರೆ. ತಮ್ಮ ಒಕ್ಕೂಟಕ್ಕೆ ಇಂಡಿಯಾ ಎಂಬ ಹೆಸರು ಇಟ್ಟುಕೊಂಡಿದ್ದಾರೆ. ಇದು ಭಾರತ ವರ್ಸಸ್ ಈಸ್ಟ್ ಇಂಡಿಯಾ ಕಂಪನಿ ಎಂದು ಕಿಡಿಕಾರಿದ್ದಾರೆ.