ಅಹಮದಾಬಾದ್: ಕೆಲವರು ತಮ್ಮ ಹಿತಾಸಕ್ತಿಗಳಿಗಾಗಿ ಸಮಾಜವನ್ನು ವಿಭಜಿಸಲು ಯತ್ನಿಸುತ್ತಿದ್ದಾರೆ, ಅದನ್ನು ತಡೆಯಬೇಕಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಸೋಮವಾರ ಹೇಳಿದರು.
ಅಹಮದಾಬಾದ್‌ನ ಶ್ರೀ ಸ್ವಾಮಿನಾರಾಯಣ ದೇವಸ್ಥಾನದ 200ನೇ ವಾರ್ಷಿಕೋತ್ಸವದ ನಿಮಿತ್ತ ಗುಜರಾತ್‌ನ ಖೇಡಾ ಜಿಲ್ಲೆಯ ವಡ್ತಾಲ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ವರ್ಚುವಲ್ ಮೂಲಕ ಭಾಗಿಯಾಗಿ ಅವರು ಮಾತನಾಡಿದರು.
2047 ರ ವೇಳೆಗೆ ಭಾರತವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ಮಾಡಲು ನಾಗರಿಕರ ನಡುವೆ ಏಕತೆ ಮತ್ತು ರಾಷ್ಟ್ರದ ಸಮಗ್ರತೆ ಮುಖ್ಯವಾಗಿದೆ. ಆದರೆ, ದುರದೃಷ್ಟವಶಾತ್ ಕೆಲವರು ನಮ್ಮ ಸಮಾಜವನ್ನು ಜಾತಿ, ಧಾರ್ಮಿಕ, ಭಾಷೆ, ಪುರುಷರು-ಮಹಿಳೆಯರು, ಗ್ರಾಮ-ನಗರ ಎಂದು ವಿಭಜಿಸಲು ಪ್ರಯತ್ನಿಸುತ್ತಿದ್ದಾರೆ. ನಾವು ನಮ್ಮ ಉದ್ದೇಶಗಳನ್ನು ಅರ್ಥ ಮಾಡಿಕೊಂಡು ಅವರನ್ನು ಸೋಲಿಸಲು ಒಗ್ಗಟ್ಟಾಗಬೇಕು ಎಂದು ಪ್ರಧಾನಿ ಹೇಳಿದರು.
ಸ್ವಾಮಿನಾರಾಯಣ ಪಂಥದ ಎಲ್ಲಾ ಸಂತರು ಭಾರತವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ಮಾಡುವ ಪ್ರತಿಜ್ಞೆ ಮಾಡಬೇಕು ಎಂದು ಮನವಿ ಮಾಡಿದರು.