ಶಿವಮೊಗ್ಗ: ಕಜಕಿಸ್ತಾನದಿಂದ ವಿದೇಶಿ ವ್ಯಕ್ತಿಯೊಬ್ಬ ಮಧ್ಯರಾತ್ರಿ ನನಗೆ ಮಿಸ್ಡ್ ಕಾಲ್ ಮಾಡಿ ಬೆದರಿಕೆ ಹಾಕಿರುವುದಾಗಿ ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ತಿಳಿಸಿದ್ದಾರೆ.
ನಗರದಲ್ಲಿ ಸೋಮವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ನಿನ್ನೆ (ಭಾನುವಾರ) ರಾತ್ರಿ 12:30 ಗಂಟೆಗೆ ಕಜಕಿಸ್ತಾನದಿಂದ ನನಗೆ ಬೆದರಿಕೆ ಬಂದಿದೆ. ಈ ಕುರಿತು ಜಿಲ್ಲಾ ರಕ್ಷಣಾಧಿಕಾರಿಗೆ ಮನವಿ ನೀಡಲಿದ್ದೇನೆ ಎಂದಿದ್ದಾರೆ.
+7(678)815-46-5 ಈ ನಂಬರ್’ನಿಂದ ಮಿಸ್ಡ್ ಕಾಲ್ ಬಂದಿದೆ. ಹಾಗಾಗಿ ಕಾನೂನು ಪ್ರಕಾರ ಸಂಬಂಧಪಟ್ಟ ಪೊಲೀಸ್ ವರಿಷ್ಠಾಧಿಕಾರಿಗೆ ದೂರು ನೀಡಲಿರುವೆ ಎಂದು ಅವರು ತಿಳಿಸಿದ್ದಾರೆ.