ಬೆಂಗಳೂರು : ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಬೆದರಿಕೆ ಕರೆಗಳು ಬಂದಿರುವ ವಿಚಾರವನ್ನು ಗಂಭೀರವಾಗಿ ಪರಿಗಣಿಸಿದ್ದೇವೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ ಹೇಳಿದರು.
ಸದಾಶಿವನಗರದ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತಮಾಡಿದ ಅವರು, ಯಾರು ಬೆದರಿಕೆ ಕರೆ ಮಾಡಿದ್ದಾರೆ? ಎಲ್ಲಿಂದ ಬಂದಿದೆ ಎಂಬುದನ್ನು ತನಿಖೆ ಮಾಡುತ್ತೇವೆ. ಆರ್‌ಎಸ್‌ಎಸ್ ವಿಚಾರದಲ್ಲಿ ಸಚಿವರು ತಮ್ಮ ಅಭಿಪ್ರಾಯ ಹೇಳಿರಬಹುದು.
ಆ ಬಗ್ಗೆ ಸರ್ಕಾರ ತೀರ್ಮಾನ ಮಾಡುತ್ತದೆ. ಅದಕ್ಕೆ ಅವರಿಗೆ ಬೆದರಿಕೆ ಮಾಡುವುದು ಸರಿಯಲ್ಲ. ಎಲ್ಲವನ್ನು ಪರಿಶೀಲನೆ ಮಾಡುವುದಕ್ಕೆ ಸೂಚಿಸಿದ್ದೇನೆ ಎಂದು ತಿಳಿಸಿದರು.















