ಮನೆ ಸುದ್ದಿ ಜಾಲ ಮೂವರ ಬಂಧನ, ವಿದ್ಯಾರ್ಥಿನಿಯರ ಜೊತೆ ಅನುಚಿತ ವರ್ತನೆ : ಮಂಗಳೂರು

ಮೂವರ ಬಂಧನ, ವಿದ್ಯಾರ್ಥಿನಿಯರ ಜೊತೆ ಅನುಚಿತ ವರ್ತನೆ : ಮಂಗಳೂರು

0

ಮಂಗಳೂರು: ದಿಡುಪೆ ಜಲಪಾತ ವೀಕ್ಷಿಸಲು ತಮ್ಮ ಜೊತೆಗೆ ಕರೆದುಕೊಂಡು ಹೋಗಿದ್ದ ವಿದ್ಯಾರ್ಥಿನಿಯರೊಂದಿಗೆ ಅನುಚಿತ ವರ್ತನೆ ತೋರಿದ ಆರೋಪದಲ್ಲಿ ಮೂವರನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿದ್ದಾರೆ. ಇವರು ಕೇರಳ ಕಾಸರಗೋಡು ಮೂಲದ ಅಬ್ದುಲ್ ಖಾದರ್ ಅಲ್ತಾಫ್ (36), ಫೈಜಲ್ ಅದಿಲ್ (27) ಹಾಗೂ ಉಸ್ಮಾನ್ ಸಾಲೀಂ (18) ಎಂಬ ಮೂವರು ಬಂಧಿತ ಆರೋಪಿಗಳು ಎಂದು ತಿಳಿದುಬಂದಿದೆ.

ಮೂವರು ಆರೋಪಿಗಳು ಮಂಗಳೂರಿನಲ್ಲಿ ವ್ಯಾಸಂಗ ಮಾಡುತ್ತಿದ್ದ ಮೂವರು ಯುವತಿಯರನ್ನು ಯುವಕರು ಮೇ 20ರಂದು ಬೆಳ್ತಂಗಡಿ ತಾಲೂಕಿನ ದಿಡುಪೆ ಜಲಪಾತಕ್ಕೆ ಕರೆದುಕೊಂಡು ಹೋಗಿದ್ದರು. ಈ ವೇಳೆ ಈ ಯುವಕರು, ತಮ್ಮೊಂದಿಗಿದ್ದ ಯುವತಿಯರೊಂದಿಗೆ ಅನುಚಿತವಾಗಿ ವರ್ತಿಸಿ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಸಂತ್ರಸ್ತ ಯುವತಿಯರು ಆಗ ಪ್ರತಿರೋಧಿಸಿದ್ದಾರೆ. ಸ್ಥಳದಲ್ಲಿದ್ದ ಜನರು ಯುವಕರನ್ನು ತಡೆದು, ಬೆಳ್ತಂಗಡಿ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ. ಈ ಮೂವರು ಯುವಕರನ್ನು ಪೊಲೀಸರು ಬಂಧಿಸಿದ್ದು, ಈ ಬಗ್ಗೆ ಬೆಳ್ತಂಗಡಿ ಠಾಣೆಯಲ್ಲಿ ಅ.ಕ್ರ:60/2026 ರಂತೆ ಪ್ರಕರಣ ದಾಖಲಾಗಿದೆ. ಈ ಕುರಿತು ಮುಂದಿನ ಕಾನೂನುಕ್ರಮ ಕೈಗೊಳ್ಳಲಾಗುವುದು ಎಂದು ದಕ್ಷಿಣ ಕನ್ನಡ ಜಿಲ್ಲಾ ಎಸ್​ಪಿ ಡಾ. ಅರುಣ್ ಕುಮಾರ್ ಅವರ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ ಎನ್ನಲಾಗಿದೆ.