ಬೆಂಗಳೂರು: ಕರ್ನಾಟಕ ಸರ್ಕಾರ ಇಂದು ಮೂರು ಹಿರಿಯ ಐಎಎಸ್ ಅಧಿಕಾರಿಗಳ ವರ್ಗಾವಣೆಗೆ ಸಂಬಂಧಿಸಿದಂತೆ ಆದೇಶ ಹೊರಡಿಸಿದ್ದು, ಇದರಲ್ಲಿ ರೋಹಿಣಿ ಸಿಂಧೂರಿ ಅವರೂ ಸೇರಿದ್ದಾರೆ.
ಈ ವೇಳೆ ರೋಹಿಣಿ ಸಿಂಧೂರಿ ಅವರು ಕೃಷಿ ಇಲಾಖೆಯ ಆಹಾರ ಸಂಸ್ಕರಣೆ ಮತ್ತು ಕೊಯ್ಲು ತಂತ್ರಜ್ಞಾನ ವಿಭಾಗದ ಕಾರ್ಯದರ್ಶಿ ಸ್ಥಾನದಿಂದ ವರ್ಗಾವಣೆಗೊಂಡು, ಕಾರ್ಮಿಕ ಇಲಾಖೆಯ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸಲಿದ್ದಾರೆ. ರಾಜ್ಯದಲ್ಲಿ ಪ್ರಮುಖ ಹುದ್ದೆಗಳಲ್ಲಿ ಸೇವೆ ಸಲ್ಲಿಸಿರುವ ರೋಹಿಣಿ ಸಿಂಧೂರಿಗೆ ಇದೀಗ ಮತ್ತೊಂದು ಮುಖ್ಯ ಇಲಾಖೆ ಜವಾಬ್ದಾರಿ ನೀಡಲಾಗಿದೆ.
ಇದರಲ್ಲಿ ಮತ್ತಿಬ್ಬರು ಹಿರಿಯ ಅಧಿಕಾರಿಗಳನ್ನೂ ವರ್ಗಾವಣೆ ಮಾಡಲಾಗಿದೆ:
- ಅಕ್ರಂ ಪಾಷಾ ಅವರು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಎಂಡಿ ನೇಮಕಗೊಂಡಿದ್ದಾರೆ.
- ಶೆಟ್ಟಣ್ಣನವರ್ ಅವರನ್ನು ಬೆಳಗಾವಿ ವಿಭಾಗದ ಪ್ರಾದೇಶಿಕ ಆಯುಕ್ತರಾಗಿ ನೇಮಿಸಲಾಗಿದೆ.
ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಅಧಿಕೃತ ಆದೇಶ ಹೊರಡಿಸಿದ್ದು, ತಕ್ಷಣದಿಂದ ಅನ್ವಯವಾಗಲಿದೆ.














