ಬೆಂಗಳೂರು: ರಾಜ್ಯದಲ್ಲಿ ಚರ್ಚೆಗೆ ಗ್ರಾಸವಾಗಿರುವ ಹಿಜಬ್- ಕೇಸರಿ ಪ್ರಕರಣ ಇಂದು ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ ನೇತೃತ್ವದ ವಿಸ್ತೃತ ಪೀಠದಲ್ಲಿ ವಿಚಾರಣೆ ನಡೆಯಲಿದೆ.
ಸರ್ಕಾರದ ಪರ ಪ್ರಭುಲಿಂಗ ನಾವದಗಿ, ಸಂಜಯ್ ಹೆಗ್ಡೆ, ಶಾಲಾ ಸಮಿತಿ ಪರವಾಗಿ ಪೂವಯ್ಯ ಅವರು ವಾದ ಮಂಡಿಸಿದರೆ, ಅರ್ಜಿದಾರರ ಪರವಾಗಿ ದೇವದತ್ತ ಕಾಮತ್, ಮೊಹಮದ್ ತಾಹಿರ್ ವಾದ ಮಂಡಿಸಲಿದ್ದಾರೆ.
ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ತಿ, ನ್ಯಾ.ಖಾಜಿ ಜೈಬುನ್ನೀಸಾ, ನ್ಯಾ.ಕೃಷ್ಣ ಎಸ್ ದೀಕ್ಷಿತ್ ನೇತೃತ್ವದ ತ್ರಿಸದಸ್ಯ ಪೀಠದಲ್ಲಿ ಶಾಲಾ ಕಾಲೇಜುಗಳಲ್ಲಿ ಹಿಜಬ್ ಧರಿಸಲು ಅನುಮತಿ ಕೋರಿ ಸಲ್ಲಿಸಲಾದ ಅರ್ಜಿಗಳ ವಿಚಾರಣೆ ನಡೆಯಲಿದೆ.
ಫೆ.8,9 ರಂದು ಎರಡು ದಿನಗಳ ಕಾಲ ಕೃಷ್ಣ ಎಸ್.ದೀಕ್ಷಿತ್ ಅವರಿದ್ದ ಏಕಸದಸ್ಯ ಪೀಠದಿಂದ ಹಿಜಬ್ ಕುರಿತ ಅರ್ಜಿಗಳ ವಿಚಾರಣೆ ನಡೆದ ಬಳಿಕಮ ಪ್ರಕರಣ ಧರ್ಮ ಸೂಕ್ಷ್ಮವಾದ ಕಾರಣ ಇದನ್ನು ನ್ಯಾಯಮೂರ್ತಿಗಳು ವಿಸ್ತೃತ ಪೀಠಕ್ಕೆ ವರ್ಗಾಯಿಸಿದ್ದರು. ಇದೀಗ ಮೂವರು ನ್ಯಾಯಮೂರ್ತಿಗಳ ನೇತೃತ್ವದಲ್ಲಿ ಹಿಜಬ್ ಕುರಿತ ಅರ್ಜಿಗಳ ವಿಚಾರಣೆ ನಡೆಯಲಿದೆ.