ಮನೆ Uncategorized ಹಿಜಬ್​- ಕೇಸರಿ ಶಾಲು ವಿವಾದ: ತ್ರಿಸದಸ್ಯ ಪೀಠದಿಂದ ಪ್ರಕರಣ ವಿಚಾರಣೆ ಆರಂಭ

ಹಿಜಬ್​- ಕೇಸರಿ ಶಾಲು ವಿವಾದ: ತ್ರಿಸದಸ್ಯ ಪೀಠದಿಂದ ಪ್ರಕರಣ ವಿಚಾರಣೆ ಆರಂಭ

0

ಬೆಂಗಳೂರು: ರಾಜ್ಯದಲ್ಲಿ ಚರ್ಚೆಗೆ ಗ್ರಾಸವಾಗಿರುವ ಹಿಜಬ್​- ಕೇಸರಿ ಪ್ರಕರಣ ಇಂದು ಮುಖ್ಯ ನ್ಯಾಯಮೂರ್ತಿ ರಿತುರಾಜ್​ ಅವಸ್ಥಿ ನೇತೃತ್ವದ ವಿಸ್ತೃತ ಪೀಠದಲ್ಲಿ ವಿಚಾರಣೆ ನಡೆಯಲಿದೆ.

ಸರ್ಕಾರದ ಪರ ಪ್ರಭುಲಿಂಗ ನಾವದಗಿ, ಸಂಜಯ್​ ಹೆಗ್ಡೆ, ಶಾಲಾ ಸಮಿತಿ ಪರವಾಗಿ ಪೂವಯ್ಯ ಅವರು ವಾದ ಮಂಡಿಸಿದರೆ, ಅರ್ಜಿದಾರರ ಪರವಾಗಿ ದೇವದತ್ತ ಕಾಮತ್​, ಮೊಹಮದ್​ ತಾಹಿರ್​ ವಾದ ಮಂಡಿಸಲಿದ್ದಾರೆ.

ಮುಖ್ಯ ನ್ಯಾಯಮೂರ್ತಿ ರಿತುರಾಜ್​ ಅವಸ್ತಿ, ನ್ಯಾ.ಖಾಜಿ ಜೈಬುನ್ನೀಸಾ, ನ್ಯಾ.ಕೃಷ್ಣ ಎಸ್​ ದೀಕ್ಷಿತ್​ ನೇತೃತ್ವದ ತ್ರಿಸದಸ್ಯ ಪೀಠದಲ್ಲಿ ಶಾಲಾ ಕಾಲೇಜುಗಳಲ್ಲಿ ಹಿಜಬ್​ ಧರಿಸಲು ಅನುಮತಿ ಕೋರಿ ಸಲ್ಲಿಸಲಾದ ಅರ್ಜಿಗಳ ವಿಚಾರಣೆ ನಡೆಯಲಿದೆ.

ಫೆ.8,9 ರಂದು ಎರಡು ದಿನಗಳ ಕಾಲ ಕೃಷ್ಣ ಎಸ್​.ದೀಕ್ಷಿತ್ ಅವರಿದ್ದ ಏಕಸದಸ್ಯ ಪೀಠದಿಂದ ಹಿಜಬ್​ ಕುರಿತ ಅರ್ಜಿಗಳ ವಿಚಾರಣೆ ನಡೆದ ಬಳಿಕಮ ಪ್ರಕರಣ ಧರ್ಮ ಸೂಕ್ಷ್ಮವಾದ ಕಾರಣ ಇದನ್ನು ನ್ಯಾಯಮೂರ್ತಿಗಳು ವಿಸ್ತೃತ ಪೀಠಕ್ಕೆ ವರ್ಗಾಯಿಸಿದ್ದರು. ಇದೀಗ ಮೂವರು ನ್ಯಾಯಮೂರ್ತಿಗಳ ನೇತೃತ್ವದಲ್ಲಿ ಹಿಜಬ್​ ಕುರಿತ ಅರ್ಜಿಗಳ ವಿಚಾರಣೆ ನಡೆಯಲಿದೆ.

ಹಿಂದಿನ ಲೇಖನಸಂತ್ರಸ್ತ ಮುಸ್ಲಿಂ ಮಹಿಳೆಯೊಂದಿಗೆ ನಮ್ಮ ಸರ್ಕಾರವಿದೆ: ಪ್ರಧಾನಿ ಮೋದಿ
ಮುಂದಿನ ಲೇಖನಲಖಿಂಪುರ ಖೇರಿ ಹಿಂಸಾಚಾರ:  ಕೇಂದ್ರ ಸಚಿವರ ಮಗನಿಗೆ ಜಾಮೀನು