ಪುತ್ತೂರು: ನಿಯಂತ್ರಣ ತಪ್ಪಿದ ಕಾರೊಂದು ಗುಂಡಿಗೆ ಬಿದ್ದ ಪರಿಣಾಮ ಮೂವರು ಮೃತಪಟ್ಟ ಘಟನೆ ಪುತ್ತೂರಿನ ಬೈಪಾಸ್ ರಸ್ತೆಯಲ್ಲಿ ಡಿ.28 ರ ಶನಿವಾರ ಬೆಳಗ್ಗೆ ಸಂಭವಿಸಿದೆ.
ಸುಳ್ಯ, ಜಟ್ಟಿಪಳ್ಳದ ಕಾನತ್ತಿಲ ನಿವಾಸಿ ಅಣ್ಣು ನಾಯ್ಕ ಮತ್ತು ಅವರ ಪುತ್ರ ಚಿಕ್ಕಮಗಳೂರು ಜಿಲ್ಲೆಯ ಕಾರ್ಮಿಕ ಇಲಾಖೆಯ ಅಧಿಕಾರಿ ಚಿದಾನಂದ ನಾಯ್ಕ ಮತ್ತು ಸಂಬಂಧಿ ರಮೇಶ್ ನಾಯ್ಕ್ ಮೃತಪಟ್ಟವರು.
ಮೃತ ದೇಹವನ್ನು ಪುತ್ತೂರು ಸರಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ತಿಳಿದು ಬಂದಿದೆ.














