ಚಿತ್ರದುರ್ಗ: ಚಿತ್ರದುರ್ಗ ತಾಲೂಕಿನ ಸಿಬಾರ ಗ್ರಾಮದ ಬಳಿ ಬುಧವಾರ ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ಮೃತಪಟ್ಟಿದ್ದಾರೆ.
ಹೆದ್ದಾರಿ ಬದಿ ನಿಂತಿದ್ದ ಲಾರಿಗೆ ಮತ್ತೊಂದು ಲಾರಿ, ಟ್ರಕ್ ಡಿಕ್ಕಿಯಾಗಿ ಅವಘಡ ಸಂಭವಿಸಿದೆ. ಲಾರಿ ಚಾಲಕ ಹಾಗೂ ಕಲ್ಲಂಗಡಿ ಸಾಗಿಸುತ್ತಿದ್ದ ಟ್ರಕ್ ನಲ್ಲಿದ್ದ ಇಬ್ಬರು ಸಾವಿಗೀಡಾಗಿದ್ದಾರೆ.
ಚಿತ್ರದುರ್ಗ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪಘಾತ ಸಂಭವಿಸಿದ್ದು, ಸ್ಥಳಕ್ಕೆ ಚಿತ್ರದುರ್ಗ ಡಿವೈಎಸ್ಪಿ ದಿನಕರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.















