ಹಾಸನ: ವಿಷ ಸೇವಿಸಿ ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣಾಗಿರುವ ಮನಕಲಕುವ ಘಟನೆ ಹಾಸನ ಜಿಲ್ಲೆಯ ಹೇಮಾವತಿ ನಗರದಲ್ಲಿ ನಡೆದಿದೆ.
ತಂದೆ ಸತ್ಯಪ್ರಕಾಶ್(54), ತಾಯಿ ಅನ್ನಪೂರ್ಣ (50) ಹಾಗೂ ಮಗ ಗೌರವ್ (21) ಆತ್ಮಹತ್ಯೆಗೆ ಶರಣಾದವರು. ಮೂವರು ಕೂಡ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ತಿಳಿದುಬಂದಿದೆ.
ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ. ಮೃತದೇಹಗಳನ್ನು ಹಾಸನ ವೈದ್ಯಕೀಯ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದ್ದು, ಈ ಕುರಿತು ಪೆನ್ಶನ್ ಮೊಹಲ್ಲಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.