ಮನೆ ಅಪರಾಧ ಒಂದೇ ಕುಟುಂಬದ ಮೂವರು ಆತ್ಮಹತ್ಯೆ

ಒಂದೇ ಕುಟುಂಬದ ಮೂವರು ಆತ್ಮಹತ್ಯೆ

0

ಹಾಸನ: ವಿಷ ಸೇವಿಸಿ ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣಾಗಿರುವ ಮನಕಲಕುವ ಘಟನೆ ಹಾಸನ ಜಿಲ್ಲೆಯ ಹೇಮಾವತಿ ನಗರದಲ್ಲಿ ನಡೆದಿದೆ.

ತಂದೆ ಸತ್ಯಪ್ರಕಾಶ್(54), ತಾಯಿ ಅನ್ನಪೂರ್ಣ (50) ಹಾಗೂ ಮಗ ಗೌರವ್ (21) ಆತ್ಮಹತ್ಯೆಗೆ ಶರಣಾದವರು. ಮೂವರು ಕೂಡ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ತಿಳಿದುಬಂದಿದೆ.

ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ. ಮೃತದೇಹಗಳನ್ನು ಹಾಸನ ವೈದ್ಯಕೀಯ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದ್ದು, ಈ ಕುರಿತು ಪೆನ್ಶನ್ ಮೊಹಲ್ಲಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹಿಂದಿನ ಲೇಖನಪಾಲಿಕೆ ವ್ಯಾಪ್ತಿಯಲ್ಲಿ ಗ್ಯಾಸ್ ಪೈಪ್ ಲೈನ್ ಕಾಮಗಾರಿ ಆರಂಭಿಸಿಲ್ಲ: ಲಕ್ಷ್ಮೀಕಾಂತ ರೆಡ್ಡಿ
ಮುಂದಿನ ಲೇಖನಅಂತರ ಕಾಲೇಜು ಗುಡ್ಡಗಾಡು ಓಟದ ಸ್ಪರ್ಧೆಗೆ ಚಾಲನೆ