ಪಾಲಕ್ಕಾಡ್ (ಕೇರಳ): ಇಬ್ಬರು ಬಿಜೆಪಿ ಕಾರ್ಯಕರ್ತರು ಸೇರಿದಂತೆ ಮೂವರ ಮೇಲೆ ಆಯುಧಗಳಿಂದ ಹಲ್ಲೆ ನಡೆಸಲಾಗಿದ್ದು, ಈ ಸಂಬಂಧ ದೂರು ದಾಖಲಾಗಿದೆ.
ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಮಂಗಳವಾರ ರಾತ್ರಿ ಈ ಹೊಡೆದಾಟ ನಡೆದಿದ್ದು, ಬಿಜೆಪಿ ಕಾರ್ಯಕರ್ತರಾದ ವಿಷ್ಣು ಮತ್ತು ದಿನೇಶ್ ಮೇಲೆ ಹಲ್ಲೆ ನಡೆದಿದೆ. ದಾಳಿ ತಡೆಯಲು ಮುಂದಾದ ವಿಷ್ಣು ತಾಯಿ ಮೇಲೂ ಹಲ್ಲೆ ನಡೆಸಲಾಗಿದೆ.
ಗಾಯಗೊಂಡ ಮೂವರನ್ನೂ ಆಸ್ಪತ್ರೆಗೆ ದಾಖಲಿಸಲಾಗಿದೆ. ಆಲತ್ತೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಇದಕ್ಕೆ ಸಂಬಂಧಿಸಿದಂತೆ ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ.













