ಮನೆ ರಾಜ್ಯ ಮೊದಲು ಪರಿಷ್ಕೃತ ಪಠ್ಯವನ್ನು ಕಸದ ಬುಟ್ಟಿಗೆ ಎಸೆಯಿರಿ: ಸಿದ್ದರಾಮಯ್ಯ

ಮೊದಲು ಪರಿಷ್ಕೃತ ಪಠ್ಯವನ್ನು ಕಸದ ಬುಟ್ಟಿಗೆ ಎಸೆಯಿರಿ: ಸಿದ್ದರಾಮಯ್ಯ

0

ಬೆಂಗಳೂರು (Bengaluru): ಪರಿಷ್ಕೃತ ಪಠ್ಯವನ್ನು ಕಸದ ಬುಟ್ಟಿಗೆ ಎಸೆಯಿರಿ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

ಈ ಬಗ್ಗೆ ಸರಣಿ ಟ್ವೀಟ್‌ ಮಾಡಿರುವ ಅವರು, ವಿಕೃತ ಮನಸ್ಸಿನ ಕಿಡಿಗೇಡಿ ಅಧ್ಯಕ್ಷ ತಯಾರಿಸಿರುವ ಪರಿಷ್ಕೃತ ಪಠ್ಯದಿಂದ ಬಹುಸಂಖ್ಯಾತ ಹಿಂದೂಗಳ ಮನಸ್ಸಿಗೆ ಮಾತ್ರವಲ್ಲ, ರಾಜ್ಯದ ಆರೂವರೆ ಕೋಟಿ ಕನ್ನಡಿಗರ ಮನಸ್ಸಿಗೆ ಘಾಸಿಯಾಗಿದೆ. ಕನ್ನಡಿಗರ ಸಹನೆಯನ್ನು ಪರೀಕ್ಷಿಸಲು ಹೋಗಬೇಡಿ, ಮೊದಲು ಈ ಪರಿಷ್ಕೃತ ಪಠ್ಯವನ್ನು ಕಸದ ಬುಟ್ಟಿಗೆ ಎಸೆಯಿರಿ ಎಂದಿದ್ದಾರೆ.

ಹಿಂದೂ ಭಾವನೆಗೆ ಧಕ್ಕೆಯಾಗಿದ್ದಕ್ಕೆ ಪಠ್ಯ ಪರಿಷ್ಕರಣೆ ಮಾಡಲಾಗಿದೆ ಎಂದು ಸಚಿವ ಬಿ. ಸಿ. ನಾಗೇಶ್ ಅಸಲಿ ಕಾರಣವನ್ನು ಬಹಿರಂಗಪಡಿಸಿದ್ದಾರೆ. ಈ ಹಿಂದೂಗಳು ಯಾರು? ಎನ್ನುವುದನ್ನು ಸಚಿವರು ಬಹಿರಂಗಪಡಿಸಿ, ಯಾವುದರಿಂದ ಯಾರ ಭಾವನೆಗೆ ಧಕ್ಕೆಯಾಗಿದೆ ಎನ್ನುವುದನ್ನು ಸ್ಪಷ್ಟಪಡಿಸಬೇಕು ಎಂದು ಒತ್ತಾಯಿಸಿದ್ದಾರೆ.

ಪರಿಷ್ಕೃತ ಪಠ್ಯಜಲ್ಲಿ ಬಸವಣ್ಣ,  ಅಂಬೇಡ್ಕರ್, ಸಾವಿತ್ರಿಬಾಯಿ ಪುಲೆ, ನಾರಾಯಣಗುರು, ಕುವೆಂಪು ಸೇರಿದಂತೆ ಹಲವು ಮಹನೀಯರ ವ್ಯಕ್ತಿತ್ವವನ್ನು ಕಡೆಗಣಿಸಲಾಗಿದೆ. ಇವರನ್ನು ಸಮಿತಿಯ ಕಿಡಿಗೇಡಿ ಅಧ್ಯಕ್ಷ ತುಚ್ಛೀಕರಿಸಿದ್ದಾನೆ ಎಂದು ಪ್ರತಿಭಟಿಸುತ್ತಿರುವವರು ಅನ್ಯಧರ್ಮಿಯರಲ್ಲ, ಹಿಂದೂಗಳೇ ಅಲ್ವಾ ಎಂದು ಪ್ರಶ್ನಿಸಿದ್ದಾರೆ. 

ಪಠ್ಯ ಪರಿಷ್ಕರಣಾ ಸಮಿತಿಯಲ್ಲಿ ದಲಿತ ಹಾಗೂ ಹಿಂದುಳಿದ ಜಾತಿಗಳ ವಿದ್ವಾಂಸರಿಗೆ ಪ್ರಾತಿನಿಧ್ಯವೇ ನೀಡಿಲ್ಲವಲ್ಲಾ? ಶಿಕ್ಷಣ ಸಚಿವರು ಕಾಳಜಿ ತೋರುತ್ತಿರುವ ಹಿಂದೂಗಳ ವ್ಯಾಖ್ಯಾನದಲ್ಲಿ ಈ ಸಮುದಾಯಗಳು ಸೇರಿಕೊಳ್ಳುವುದಿಲ್ಲವೇ? ಈ ಕಾರಣಕ್ಕಾಗಿ ಅವರಿಗೆ ಪ್ರಾತಿನಿಧ್ಯ ನೀಡಿಲ್ಲವೇ? ಬಸವಣ್ಣ,ಅಂಬೇಡ್ಕರ್ ಅವರು ಹಿಂದೂ ಧರ್ಮವನ್ನು ತ್ಯಜಿಸಿದ ಕಾರಣಕ್ಕೆ ಅವರನ್ನು ನಿರ್ಲಕ್ಷಿತಲಾಯಿತೇ? ಅವಮಾನ ಮಾಡಲಾಯಿತೇ? ನಾರಾಯಣ ಗುರಿ, ಪೆರಿಯಾರ್, ಕುವೆಂಪು ಅವರು ಹಿಂದೂ ಧರ್ಮದ ದೋಷಗಳನ್ನು ಎತ್ತಿ ತೋರಿಸಿದ್ದಕ್ಕಾಗಿ ನಿರ್ಲಕ್ಷ್ಯ ಮಾಡಲಾಯಿತೇ? ಹಾಗೆಂದು ಹೇಳಿಬಿಡಿ  ಎಂದಿದ್ದಾರೆ.

ಹಿಂದಿನ ಲೇಖನಸಿದ್ದರಾಮಯ್ಯ ಅವರ ವಿರುದ್ಧ ಹರಿಹಾಯ್ದ ಸಿಎಂ ಬೊಮ್ಮಾಯಿ
ಮುಂದಿನ ಲೇಖನರೋಹಿತ್‌ ಚಕ್ರತೀರ್ಥ ವಿರುದ್ಧ ದೂರು ದಾಖಲು