ಬೆಂಗಳೂರು: ಅಕ್ಟೋಬರ್ 8 ರಿಂದ 21 ರವರೆಗೆ ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದ.ಕ., ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಮಂಡ್ಯ ಮತ್ತು ಚಾಮರಾಜನಗರ ಜಿಲ್ಲೆಗಳ ಘಟ್ಟಗಳಲ್ಲಿ ಭಾರೀ ಮತ್ತು ತೀವ್ರ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.
ಬೆಂಗಳೂರು, ರಾಮನಗರ, ಉಡುಪಿ, ಉತ್ತರಕನ್ನಡ, ತುಮಕೂರು, ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಭಾರೀ ಬಿರುಗಾಳಿ ಸಹಿತ ಮಳೆಯಾಗುವ ಸಂಭವವಿದೆ.