ಮನೆ ರಾಜ್ಯ ರಾಜ್ಯದ ಕೆಲವೆಡೆ ಇಂದು ಗುಡುಗು ಸಹಿತ ಮಳೆ

ರಾಜ್ಯದ ಕೆಲವೆಡೆ ಇಂದು ಗುಡುಗು ಸಹಿತ ಮಳೆ

0

ಬೆಂಗಳೂರು: ರಾಜ್ಯದ ಕೆಲವೆಡೆ ಗುರುವಾರವೂ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಗರಿಷ್ಠ ಉಷ್ಣಾಂಶವು ಕರಾವಳಿಯ ಒಂದೆರಡು ಕಡೆ ಸಾಮಾನ್ಯಕ್ಕಿಂತ 2–3 ಡಿಗ್ರಿ ಸೆಲ್ಸಿಯಸ್ ಹೆಚ್ಚಳವಾಗುವ ಸಾಧ್ಯತೆಯಿದೆ.

ಬುಧವಾರ ಕಲಬುರಗಿಯಲ್ಲಿ ಗರಿಷ್ಠ ಉಷ್ಣಾಂಶ (37.5 ಡಿಗ್ರಿ ಸೆಲ್ಸಿಯಸ್) ಹಾಗೂ ಬಾಗಲಕೋಟೆಯಲ್ಲಿ ಕನಿಷ್ಠ ಉಷ್ಣಾಂಶ (13 ಡಿಗ್ರಿ ಸೆಲ್ಸಿಯಸ್) ದಾಖಲಾಗಿದೆ.

ಗುರುವಾರ ಕರಾವಳಿಯ ಎಲ್ಲ ಜಿಲ್ಲೆಗಳು, ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ, ಹಾವೇರಿ ಮತ್ತು ದಕ್ಷಿಣ ಒಳನಾಡಿನ ಬಳ್ಳಾರಿ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ರಾಮನಗರ, ಶಿವಮೊಗ್ಗ ಜಿಲ್ಲೆಯ ಒಂದೆರಡು ಕಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ಹೇಳಿದೆ.

ಬೆಂಗಳೂರಿನಲ್ಲಿ ಭಾಗಶಃ ಮೋಡ ಕವಿದ ವಾತಾವರಣ ಇರುತ್ತದೆ.ಸಾಧಾರಣ ಮಳೆಯಾಗುವ ಸಾಧ್ಯತೆಯಿದ್ದು, ಗರಿಷ್ಠ ಉಷ್ಣಾಂಶ 33 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ಉಷ್ಣಾಂಶ 19 ಡಿಗ್ರಿ ಸೆಲ್ಸಿಯಸ್ ಇರಲಿದೆ ಎಂದು ಇಲಾಖೆ ತಿಳಿಸಿದೆ.