ಮನೆ ಅಪರಾಧ ಮಲೆ ಮಹದೇಶ್ವರದಲ್ಲಿ ಹುಲಿ ವಿಷ ಹಾಕಿ ಹತ್ಯೆ ಪ್ರಕರಣ: ಮೂವರು ಆರೋಪಿಗಳನ್ನು ವಶಕ್ಕೆ ಪಡೆದ ಅರಣ್ಯ...

ಮಲೆ ಮಹದೇಶ್ವರದಲ್ಲಿ ಹುಲಿ ವಿಷ ಹಾಕಿ ಹತ್ಯೆ ಪ್ರಕರಣ: ಮೂವರು ಆರೋಪಿಗಳನ್ನು ವಶಕ್ಕೆ ಪಡೆದ ಅರಣ್ಯ ಇಲಾಖೆ

0

ಚಾಮರಾಜನಗರ : ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ವನ್ಯಧಾಮದಲ್ಲಿ 5 ಹುಲಿಗಳನ್ನು ವಿಷ ಹಾಕಿ ಕೊಂದಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ 3 ಆರೋಪಿಗಳನ್ನು ಇಂದು ಅರಣ್ಯ ಇಲಾಖೆ ಅಧಿಕಾರಿಗಳು ಹನೂರಿನ ಸಿವಿಲ್ ಮತ್ತು JMFC ಕೋರ್ಟಿಗೆ ಹಾಜರುಪಡಿಸಿದ್ದರು. ಈ ವೇಳೆ ಅರಣ್ಯ ಇಲಾಖೆ ಅಧಿಕಾರಿಗಳು ಮೂವರನ್ನು ಹೆಚ್ಚಿನ ವಿಚಾರಣೆಗೆ ಮೂರು ದಿನ ವಶಕ್ಕೆ ಪಡೆದುಕೊಂಡಿದ್ದಾರೆ.

ಮಲೆ ಮಹದೇಶ್ವರ ಬೆಟ್ಟ ವನ್ಯದಮದಲ್ಲಿ ಇತ್ತೀಚಿಗೆ ವಿಷ ಹಾಕಿ ಐದು ಹುಲಿಗಳನ್ನು ಹೊಂದಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಂದು ಅರಣ್ಯ ಅಧಿಕಾರಿಗಳು ಆರೋಪಿಗಳಾದಂತಹ ಕೋನಪ್ಪ ಮಾದುರಾಜು ಹಾಗು ನಾಗರಾಜುನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು . ಈ ವೇಳೆ ಆರೋಗ್ಯಗಳು ಹೆಚ್ಚಿನ ವಿಚಾರಣೆಗಾಗಿ ಅರಣ್ಯ ಅಧಿಕಾರಿಗಳು ಮೂರು ದಿನ ವಶಕ್ಕೆ ಪಡೆದುಕೊಂಡಿದ್ದಾರೆ. ಚಾಮರಾಜನಗರ ಜಿಲ್ಲೆಯ ಹನೂರಿನ ಸಿವಿಲ್ ಮತ್ತು ಜೆಎಂಎಫ್ ಸಿ ನ್ಯಾಯಾಲಯದಲ್ಲಿ ವಿಚಾರಣೆ ನಡೆದಿತ್ತು.