ಮನೆ ರಾಜ್ಯ ಭೀಮನಬೀಡು ಗ್ರಾಮದಲ್ಲಿ ಮತ್ತೆ ಹುಲಿ ಪ್ರತ್ಯಕ್ಷ – ಗ್ರಾಮಸ್ಥರಲ್ಲಿ ಆತಂಕ..!

ಭೀಮನಬೀಡು ಗ್ರಾಮದಲ್ಲಿ ಮತ್ತೆ ಹುಲಿ ಪ್ರತ್ಯಕ್ಷ – ಗ್ರಾಮಸ್ಥರಲ್ಲಿ ಆತಂಕ..!

0

ಚಾಮರಾಜನಗರ : ಭೀಮನಬೀಡು ಗ್ರಾಮದಲ್ಲಿ ಮತ್ತೆ ಹುಲಿ ಪ್ರತ್ಯಕ್ಷವಾಗಿದ್ದು, ಗ್ರಾಮಸ್ಥರು ಆತಂಕಗೊಂಡಿದ್ದಾರೆ.

ಹುಲಿ ಸೆರೆಗೆ ಅರಣ್ಯ ಇಲಾಖೆ ಕಾರ್ಯಾಚರಣೆ ನಡೆಸುತ್ತಿದೆ. ಡ್ರೋನ್ ಮೂಲಕ ಕಾರ್ಯಾಚರಣೆ ನಡೆಸಲು ಅಧಿಕಾರಿಗಳು ಹಾಗೂ ಸಿಬ್ಬಂದಿ ಮುಂದಾಗಿದ್ದಾರೆ. ಬಂದೂಕು ಸಮೇತ ಕಾರ್ಯಾಚರಣೆಗೆ ಇಳಿದಿದ್ದಾರೆ.

ಇತ್ತೀಚೆಗೆ ಹಂದಿಯನ್ನು ಹುಲಿ ಕೊಂದಿತ್ತು. ಮೊನ್ನೆ ಕೂಡ ಇದೇ ಗ್ರಾಮದಲ್ಲಿ ಕುರಿಗಳನ್ನು ಬಲಿ ಪಡೆದಿದೆ. ಇದೀಗ ಹುಲಿ ಪ್ರತ್ಯಕ್ಷವಾದ ಹಿನ್ನೆಲೆ ಗ್ರಾಮಸ್ಥರು ಭಯಭೀತರಾಗಿದ್ದಾರೆ. ಹುಲಿ ಸೆರೆ ಹಿಡಿಯುವಂತೆ ಒತ್ತಾಯಿಸಿದ್ದಾರೆ.