ಮೈಸೂರು: ಇಲ್ಲಿನ ವರಕೂಡು ಮೊರಾರ್ಜಿ ಶಾಲೆ ಹಿಂಭಾಗ ಹುಲಿ ಕಾಣಿಸಿಕೊಂಡಿದ್ದು, ಸ್ಥಳೀಯರು ಆತಂಕಗೊಂಡಿದ್ದಾರೆ.
ಮೈಸೂರು ತಾಲೂಕಿನ ವರುಣ ಸಮೀಪದ ವರಕೂಡು ಗ್ರಾಮದ ಮಹದೇಶ್ವರ ದೇವಸ್ಥಾನದ ರಸ್ತೆಯಲ್ಲಿ ಬಳಿ ಹುಲಿ ಕಾಣಿಸಿಕೊಂಡಿದೆ. ಶನಿವಾರ ಬೆಳಿಗ್ಗೆ 10:30 ರ ವೇಳೆಯಲ್ಲಿ ಟ್ರ್ಯಾಕ್ಟರ್ ನಲ್ಲಿ ಹೋಗುತ್ತಿದ್ದವರಿಗೆ ಕಾಣಿಸಿಕೊಂಡಿದೆ.
ಈ ದಾರಿಯಲ್ಲಿ ಹೋಗುತ್ತಿದ್ದ ಟ್ರ್ಯಾಕ್ಟರ್ ಚಾಲಕ ಹುಲಿಯ ಚಲನವಲನದ ವಿಡಿಯೋ ಸೆರೆ ಹಿಡಿದಿದ್ದು, ಇದೀಗ ವೈರಲ್ ಆಗಿದೆ. ಕೂಡಲೇ ಹುಲಿ ಸೆರೆಹಿಡಿಯುವಂತೆ ಅರಣ್ಯ ಇಲಾಖೆಗೆ ಸ್ಥಳೀಯರು ಒತ್ತಾಯಿಸಿದ್ದಾರೆ.