ಮನೆ ಅಪರಾಧ ಹುಲಿ ಚರ್ಮ ಮಾರಾಟಕ್ಕೆ ಯತ್ನ, ನಾಲ್ವರ ಬಂಧನ

ಹುಲಿ ಚರ್ಮ ಮಾರಾಟಕ್ಕೆ ಯತ್ನ, ನಾಲ್ವರ ಬಂಧನ

0

ಮೈಸೂರು : ವಯಸ್ಸಾದ ಹುಲಿಯನ್ನ ಕೊಂದು, ಅದರ ಚರ್ಮ ಮಾರಾಟ ಮಾಡಲು ಯತ್ನಿಸಿದ ನಾಲ್ವರು ಆರೋಪಿಗಳನ್ನ ಬಂಧಿಸಲಾಗಿದೆ. ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ತರಳುಬಾಗೆ ತಟ್ಟೆಹಳ್ಳಿ ಭಾಗದಲ್ಲಿ ವಯಸ್ಸಾದ ಹುಲಿ ಕೊಂದು, ಅದರ ಚರ್ಮ, ಉಗುರು ಹಾಗೂ ಪಾದಗಳನ್ನ ಕತ್ತರಿಸಿಕೊಂಡು ಮಾರಾಟ ಮಾಡಲು ಯತ್ನಿಸಿದ ದಿಡ್ಡಹಳ್ಳಿ ಹಾಡಿಯ ಹರೀಶ, ರಮೇಶ್, ಮನು ಹಾಗೂ ರಾಜೇಶ್ ಎಂಬುವರನ್ನು ಅರಣ್ಯ ಇಲಾಖೆಯ ಸಂಚಾರಿ ದಳದವರು ಬಂಧಿಸಿದ್ದಾರೆ. ಆರೋಪಿಗಳ ವಿರುದ್ಧ ತನಿಖೆ ಕೈಗೊಂಡಿದ್ದಾರೆ.

ಈ ಭಾಗದಲ್ಲಿ ಹುಲಿಗಳನ್ನ ಕೊಂದು ಅದರ ಚರ್ಮ ಹಾಗೂ ಇತರ ಭಾಗಗಳನ್ನ ಕತ್ತರಿಸಿ ಮಾರಾಟ ಮಾಡುತ್ತಿದ್ದಾರೆ ಎಂಬ ಖಚಿತ ಮಾಹಿತಿಯ ಮೇರೆಗೆ ದಾಳಿ ಮಾಡಿ ಆರೋಪಿಗಳನ್ನ ಬಂಧಿಸಲಾಗಿದೆ. ಹೆಚ್ಚಿನ ವಿಚಾರಣೆಗೆ ಒಳಪಡಿಸಲಾಗಿದೆ ಎಂದು ಅರಣ್ಯ ಅಧಿಕಾರಿಗಳು ತಿಳಿಸಿದ್ದಾರೆ.

ಹಿಂದಿನ ಲೇಖನಕಟ್ಟೆಯನ್ನು ಮುಚ್ಚಿ, ಸ್ಮಶಾನ ನಿರ್ಮಿಸಲು ಮುಂದಾದ ಇಲಾಖೆ: ಸಾರ್ವಜನಿಕರ ಆಕ್ರೋಶ
ಮುಂದಿನ ಲೇಖನಅಂತರರಾಷ್ಟ್ರೀಯ ಬಾಲ್ಯದ ಕ್ಯಾನ್ಸರ್ ದಿನಾಚರಣೆ