ಮನೆ ರಾಜಕೀಯ ರಾಜಕೀಯ ಪ್ರವೇಶಕ್ಕೆ ಸಮಯ ಪಕ್ವವಾಗಿದೆ: ವಿ.ಕೆ. ಶಶಿಕಲಾ

ರಾಜಕೀಯ ಪ್ರವೇಶಕ್ಕೆ ಸಮಯ ಪಕ್ವವಾಗಿದೆ: ವಿ.ಕೆ. ಶಶಿಕಲಾ

0

ಚೆನ್ನೈ: ತಮಿಳುನಾಡಿನಲ್ಲಿ ಇತ್ತೀಚೆಗೆ ನಡೆದ ಲೋಕಸಭೆ ಚುನಾವಣೆಯಲ್ಲಿ ಎಐಎಡಿಎಂಕೆ ಸೋಲಿನ ಬಳಿಕ ಮಾಜಿ ಮುಖ್ಯಮಂತ್ರಿ ಜೆ. ಜಯಲಲಿತಾ ಅವರ ನಿಕಟವರ್ತಿ ವಿಕೆ ಶಶಿಕಲಾ ರಾಜಕೀಯಕ್ಕೆ ಮರಳುವುದಾಗಿ ಮಹತ್ವದ ಹೇಳಿಕೆಯೊಂದನ್ನು ಭಾನುವಾರ ನೀಡಿದ್ದಾರೆ.

Join Our Whatsapp Group

ಈ ಕುರಿತು ಮೊದಲ ಹೇಳಿಕೆ ನೀಡಿದ ಅವರು ಕಳೆದ ಲೋಕಸಭಾ ಚುನಾವಣೆಯಲ್ಲಿ ಎಐಎಡಿಎಂಕೆ ಹೀನಾಯ ಸೋಲು ಅನುಭವಿಸಿದ್ದು ಇದರಿಂದ ಪಕ್ಷ ಹಿಂದೆ ಸರಿಯಲ್ಲ ಮುಂಬರುವ 2026ರ ವಿಧಾನಸಭಾ ಚುನಾವಣೆಯಲ್ಲಿ ಎಐಎಡಿಎಂಕೆ ಸ್ಪಷ್ಟ ಬಹುಮತದೊಂದಿಗೆ ಸರಕಾರ ರಚಿಸುವುದಾಗಿ ಹೇಳಿದ್ದಾರೆ ಅದಕ್ಕಾಗಿ ಈಗಿನಿಂದಲೇ ಪಕ್ಷ ಸಂಘಟನೆ ಕೆಲಸ ಆರಂಭಿಸುವುದಾಗಿ ಹೇಳಿಕೊಂಡಿದ್ದಾರೆ.

ಅಕ್ರಮ ಆಸ್ತಿ ಗಳಿಕೆ ಆರೋಪದಡಿ ಕಳೆದ ನಾಲ್ಕು ವರ್ಷಗಳಿಂದ ಪರಪ್ಪಮನ ಅಗ್ರಹಾರ ಜೈಲಿನಲ್ಲಿ ಶಿಕ್ಷೆ ಅನುಭವಿಸುತ್ತಿದ್ದ ತಮಿಳುನಾಡು ಮಾಜಿ ಮುಖ್ಯಮಂತ್ರಿ ಜಯಲಲಿತಾ ಆಪ್ತೆ ಶಶಿಕಲಾ, 2021ರಲ್ಲಿ ಜೈಲಿನಿಂದ ಬಿಡುಗಡೆಗೊಂಡಿದ್ದರು. ಅಂದಿನಿಂದ ಇಂದಿನವರೆಗೆ ರಾಜಕೀಯದಿಂದಲೇ ದೂರ ಉಳಿದಿದ್ದ ಶಶಿಕಲಾ ಇದೀಗ ಮತ್ತೆ ಎಐಎಡಿಎಂಕೆ ಪಕ್ಷವನ್ನು ಮುನ್ನಡೆಸಲು ಮುಂದಾಗಿದ್ದಾರೆ. ಅದಕ್ಕಾಗಿ ಕ್ಷೇತ್ರದಲ್ಲಿ ಸಂಚಾರ ಮಾಡಿ ಪಕ್ಷ ಸಂಘಟನೆ ನಡೆಸಿ ಮುಂದಿನ ಲೋಕಸಭಾ ಚುನಾವಣೆಯಲ್ಲಿ ಸ್ಪಷ್ಟ ಬಹುಮತದೊಂದಿಗೆ ಎಐಎಡಿಎಂಕೆ ಪಕ್ಷ ಅಧಿಕಾರ ನಡೆಸುವ ಕುರಿತು ಹೇಳಿಕೆ ನೀಡಿದ್ದಾರೆ.

ಹಿಂದಿನ ಲೇಖನತೀರ್ಥಹಳ್ಳಿ: ಬಸ್-ಲಾರಿ ಡಿಕ್ಕಿ, ಕೆಲವರಿಗೆ ಸಣ್ಣಪುಟ್ಟ ಗಾಯ
ಮುಂದಿನ ಲೇಖನಕಾಂಚನಜುಂಗಾ ಎಕ್ಸ್​’ಪ್ರೆಸ್’​ಗೆ ಗೂಡ್ಸ್​ ರೈಲು ಡಿಕ್ಕಿ: ಹಲವು ಪ್ರಯಾಣಿಕರಿಗೆ ಗಂಭೀರ ಗಾಯ