ಮನೆ ಅಪರಾಧ ತಿಪಟೂರು: ಮದ್ಯಪಾನ ಮಾಡಿ ಆಸ್ಪತ್ರೆಯಲ್ಲೇ ಮಲಗಿದ ವೈದ್ಯ

ತಿಪಟೂರು: ಮದ್ಯಪಾನ ಮಾಡಿ ಆಸ್ಪತ್ರೆಯಲ್ಲೇ ಮಲಗಿದ ವೈದ್ಯ

0

ತುಮಕೂರು: ತಿಪಟೂರು ತಾಲ್ಲೂಕು ಸಾರ್ವಜನಿಕ ಆಸ್ಪತ್ರೆಯ ವೈದ್ಯರೊಬ್ಬರು ಕರ್ತವ್ಯದಲ್ಲಿದ್ದಾಗಲೇ ಮದ್ಯಪಾನ ಮಾಡಿ ಮಲಗಿರುವ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ಸೋಮವಾರ ಮಧ್ಯಾಹ್ನ ಹೊರ ರೋಗಿಗಳು ಚಿಕಿತ್ಸೆಗಾಗಿ ಕಾಯುತ್ತಿದ್ದಾಗಲೇ ದಂತ ವಿಭಾಗದ ಡಾ.ಜಯಪ್ರಕಾಶ್ ಮದ್ಯಪಾನ ಮಾಡಿ ಟೇಬಲ್‌ ಮೇಲೆ ಕಾಲಿಟ್ಟು ಕುರ್ಚಿಯಲ್ಲಿಯೇ ಮಲಗಿದ್ದಾರೆ.

ಮಾತನಾಡಲು ಪ್ರಯತ್ನಿಸಿದ ರೋಗಿಗಳನ್ನು ಹೊರ ಹೋಗುವಂತೆ ವೈದ್ಯ ಹೇಳಿರುವುದು ವಿಡಿಯೊದಲ್ಲಿ ಸೆರೆಯಾಗಿದೆ. ಚಿಕಿತ್ಸೆಗೆ ಬಂದವರೊಬ್ಬರು ಮೊಬೈಲ್‌’ನಲ್ಲಿ ಈ ದೃಶ್ಯ ಸೆರೆ ಹಿಡಿದು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದಾರೆ.

ಈ ಮೊದಲು ನೆಲಮಂಗಲ ಸಾರ್ವಜನಿಕ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದ ಇವರು ಮದ್ಯಪಾನ ಮಾಡಿದ ಆರೋಪದ ಮೇಲೆ ಅಮಾನತುಗೊಂಡಿದ್ದರು. ವರ್ಷದ ಹಿಂದೆ ಅವರನ್ನು ತಿಪಟೂರು ಸಾರ್ವಜನಿಕ ಆಸ್ಪತ್ರೆಗೆ ವರ್ಗಾವಣೆ ಮಾಡಲಾಗಿತ್ತು.

ವೈದ್ಯರ ವರ್ತನೆಯನ್ನು ಆರೋಗ್ಯ ಇಲಾಖೆಯ ಆಯುಕ್ತರ ಗಮನಕ್ಕೆ ತರಲಾಗಿದೆ. ಈ ಕುರಿತು ತನಿಖೆ ನಡೆಸಿ, ಸರ್ಕಾರಕ್ಕೆ ವರದಿ ಸಲ್ಲಿಸಲಾಗುವುದು ಎಂದು ಡಿಎಚ್‌ ಒ ಡಾ.ಡಿ.ಎನ್‌. ಮಂಜುನಾಥ್‌ ಹೇಳಿದ್ದಾರೆ.

ಹಿಂದಿನ ಲೇಖನಡಿಗ್ರಿ ಪಾಸ್ ಮಾಡಿದ ಮಹಿಳೆಯರಿಗೆ ಬೆಂಗಳೂರಿನಲ್ಲಿನ ಬೆಸ್ಟ್ ಜಾಬ್ ಗಳು ಯಾವುವು? ಜಾಬ್ ಸರ್ಚ್ ಮಾಡುವುದೇಗೆ?
ಮುಂದಿನ ಲೇಖನಶಾಸಕ ವಿರೂಪಾಕ್ಷಪ್ಪ, ಪುತ್ರ ಪ್ರಶಾಂತ್ ವಿರುದ್ಧ ಮಾನಹಾನಿ ಸುದ್ದಿ ಪ್ರಕಟಿಸದಂತೆ ಮಾಧ್ಯಮಗಳಿಗೆ ಪ್ರತಿಬಂಧಕಾದೇಶ