ಹಾವೇರಿ: ಟಿಪ್ಪರ್ ಹಾಗೂ ಕಾರು ಮುಖಾಮುಖಿ ಡಿಕ್ಕಿಯಾದ ಪರಿಣಾಮ ಕಾರಿನಲ್ಲಿದ್ದ ನಾಲ್ವರಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು ಇಬ್ಬರು ಗಾಯಗೊಂಡಿರುವ ಘಟನೆ ರಾಣೆಬೆನ್ನೂರು ತಾಲೂಕಿನ ಅಂಕಸಾಪುರ ಗ್ರಾಮದಲ್ಲಿ
ಮಾಲತೇಶ್ ಕುಂದ್ರಳ್ಳಿ (21), ಮಾಲತೇಶ್(24) ಮೃತ ದುರ್ದೈವಿಗಳು.
ಘಟನೆಯಲ್ಲಿ ರಾಣೆಬೆನ್ನೂರಿನ ಲಲಿತಾ ಪಾಟೀಲ್, ನಾಗರಾಜ್ ಎಂಬುವರಿಗೆ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನು ಲಲಿತಾ ಪಾಟೀಲ್ ಅವರಿಗೆ ಗಂಭೀರ ಗಾಯಗಳಾದ ಹಿನ್ನೆಲೆ ದಾವಣಗೆರೆ ಜಿಲ್ಲಾಸ್ಪತ್ರೆಗೆ ಸಾಗಿಸಲಾಗಿದೆ.
ರಾಣೆಬೆನ್ನೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
Saval TV on YouTube