ಮನೆ ರಾಜ್ಯ ಟಿಪ್ಪರ್‌, ಇನ್ನೋವಾ ನಡುವೆ ಡಿಕ್ಕಿ – ಚಾಲಕ ಸಜೀವ ದಹನ

ಟಿಪ್ಪರ್‌, ಇನ್ನೋವಾ ನಡುವೆ ಡಿಕ್ಕಿ – ಚಾಲಕ ಸಜೀವ ದಹನ

0

ಮಂಡ್ಯ : ಟಿಪ್ಪರ್ ಹಾಗೂ ಇನ್ನೋವಾ ಕಾರಿನ ನಡುವೆ ಡಿಕ್ಕಿಯಾಗಿ, ಕಾರು ಹೊತ್ತಿ ಉರಿದ ಪರಿಣಾಮ ಚಾಲಕ ಸಜೀವ ದಹನವಾದ ಘಟನೆ ಶ್ರೀರಂಗಪಟ್ಟಣ ತಾಲೂಕಿನ ಪಾಲಹಳ್ಳಿ ಬಳಿ ನಡೆದಿದೆ.

ಹುಣಸೂರು ಮೂಲದ ಚಂದ್ರಶೇಖರ್‌ ಮೃತ ದುರ್ದೈವಿ ಎಂದು ತಿಳಿದು ಬಂದಿದೆ. ನೆನ್ನೆ (ಬುಧವಾರ) ತಡರಾತ್ರಿ ಈ ಘಟನೆ ನಡೆದಿದ್ದು, ಹುಣಸೂರು ಕಡೆಗೆ ಹೋಗುತ್ತಿದ್ದ ಕಾರು, ಶ್ರೀರಂಗಪಟ್ಟಣ ಕಡೆಗೆ ಬರುತ್ತಿದ್ದ ಟಿಪ್ಪರ್ ನಡುವೆ ಡಿಕ್ಕಿ ಸಂಭವಿಸಿತ್ತು. ತಕ್ಷಣ ಕಾರು ಹೊತ್ತಿ ಉರಿದಿತ್ತು. ಕಾರಿನಿಂದ ಹೊರಬರಲಾರದೆ ಚಾಲಕ ಸಾವನ್ನಪ್ಪಿದ್ದಾರೆ.

ಚಂದ್ರಶೇಖರ್ ಮೃತದೇಹವನ್ನು ಮೈಸೂರಿನ ಕೆ.ಆರ್ ಆಸ್ಪತ್ರೆ ಶವಗಾರಕ್ಕೆ ರವಾನೆ ಮಾಡಲಾಗಿದ್ದು, ಶ್ರೀರಂಗಪಟ್ಟಣ ಟೌನ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ‌ ಈ ಅಪಘಾತ ನಡೆದಿದೆ.