ಮದ್ದೂರು: ಚಲಿಸುತ್ತಿದ್ದ ಕಾರಿನ ಟೈಯರ್ ಸ್ಫೋಟಗೊಂಡು ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಗೆ ಡಿಕ್ಕಿ ಹೊಡೆದ ಕಾರು 8 ಬಾರಿ ಪಲ್ಟಿ ಹೊಡೆದಿದೆ. ಅದೃಷ್ಠವಶಾತ್ ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಮೈಸೂರಿನಿಂದ ಬೆಂಗಳೂರಿಗೆ ತೆರಳುವಾಗ ಮದ್ದೂರಿನ ಬೆಂಗಳೂರು-ಮೈಸೂರು ನೂತನ ಹೆದ್ದಾರಿಯಲ್ಲಿ ಅಪಘಾತ ನಡೆದಿದೆ.
ಬೆಂಗಳೂರು ಮೂಲದ ವಿನೋದ್ ಎಂಬುವವರಿಗೆ ಸೇರಿದ ಕಾರು ಅಪಘಾತಕ್ಕೀಡಾಗಿದ್ದು, ಅಪಘಾತದ ವೇಳೆ ಕಾರು ಸಂಪೂರ್ಣ ಜಖಂ ಆಗಿದೆ.
ಕಾರಿನಲ್ಲಿದ್ದವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಗಾಯಗೊಂಡವರನ್ನ ಮದ್ದೂರು ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದೆ.
ಮದ್ದೂರು ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.