ಮನೆ ಅಪರಾಧ ಹಿರಿಯ ವಿದ್ಯಾರ್ಥಿಗಳ ರ್ಯಾಗಿಂಗ್ ನಿಂದ ಬೇಸತ್ತ ವಿದ್ಯಾರ್ಥಿನಿ ಆತ್ಮಹತ್ಯೆ

ಹಿರಿಯ ವಿದ್ಯಾರ್ಥಿಗಳ ರ್ಯಾಗಿಂಗ್ ನಿಂದ ಬೇಸತ್ತ ವಿದ್ಯಾರ್ಥಿನಿ ಆತ್ಮಹತ್ಯೆ

0

ಮಡಿಕೇರಿ: ಶಾಲೆಯ ಹಿರಿಯ ವಿದ್ಯಾರ್ಥಿಗಳ ರ‍್ಯಾಗಿಂಗ್‘ನಿಂದ ಬೇಸತ್ತ  7ನೇ ತರಗತಿಯ ವಿದ್ಯಾರ್ಥಿನಿ ಮನೆಯಲ್ಲೇ ನೇಣಿಗೆ ಶರಣಾಗಿರುವ ಘಟನೆ ಜಿಲ್ಲೆಯ ಸೋಮವಾರಪೇಟೆ ತಾಲ್ಲೂಕಿನ ಶಿವರಹಳ್ಳಿ ಗ್ರಾಮದಲ್ಲಿ ನಡೆದಿದೆ.

ಶಿವರಹಳ್ಳಿ ಗ್ರಾಮದ ಜಿತೇಂದ್ರ-ಅಕ್ಷತಾ ದಂಪತಿಯ ಪುತ್ರಿ ವೈಷ್ಣವಿ (13) ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ.

ಸೊಮವಾರಪೇಟೆಯ ಖಾಸಗಿ ಶಾಲೆಯಲ್ಲಿ  7ನೇ ತರಗತಿ ಓದುತ್ತಿದ್ದ ವೈಷ್ಣವಿಗೆ ಕಳೆದ ಒಂದು ವಾರದ ಹಿಂದೆ ರ‍್ಯಾಗಿಂಗ್  ಮಾಡಲಾಗಿತ್ತು, ಇದರಿಂದ  ಖಿನ್ನತೆಗೊಳಗಾಗಿದ್ದ ಆಕೆ ಶನಿವಾರ ರಾತ್ರಿ ಮನೆಯಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ .

ರ‍್ಯಾಗಿಂಗ್  ಬಗ್ಗೆ ಪೋಷಕರಿಗೆ ವಿಷಯ ತಿಳಿಸಿದ್ದ ವೈಷ್ಣವಿ ಶಾಲೆಯಲ್ಲಿ ಈ ಬಗ್ಗೆ ಯಾರಿಗೂ ಮಾಹಿತಿ  ನೀಡಿರಲಿಲ್ಲ ಎಂದು ತಿಳಿದು ಬಂದಿದೆ.

ಶನಿವಾರಸಂತೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಶನಿವಾರಸಂತೆ ಸಮುದಾಯ ಆರೋಗ್ಯ ಕೇಂದ್ರಕ್ಕೆ ರವಾನಿಸಲಾಗಿದೆ.

ಹಿಂದಿನ ಲೇಖನಚಾಮರಾಜನಗರ: ಮಚ್ಚಿನಿಂದ ಹೊಡೆದು ಪತ್ನಿಯನ್ನು ಕೊಂದ ಪತಿ
ಮುಂದಿನ ಲೇಖನಲಂಡನ್ ನ ಭಾರತೀಯ ಹೈಕಮೀಷನರ್ ಕಚೇರಿಯಲ್ಲಿ ರಾಷ್ಟ್ರಧ್ವಜಕ್ಕೆ ಖಲಿಸ್ತಾನಿ ಉಗ್ರರಿಂದ ಅಪಮಾನ