ತೀರ್ಥಹಳ್ಳಿ: ವ್ಯಕ್ತಿಯ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿರುವ ಘಟನೆ ಪಟ್ಟಣದ ಹೃದಯ ಭಾಗದಲ್ಲಿ ಇರುವ ತರಕಾರಿ ಮಾರ್ಕೆಟ್ ಮಾರ್ಕೆಟ್ ಬಳಿ ನಡೆದಿದೆ.
ಶುಕ್ರವಾರ ತಡರಾತ್ರಿ ಈ ಘಟನೆ ನಡೆದಿರುವ ಸಾಧ್ಯತೆ ಇದ್ದು, ಸ್ಥಳಕ್ಕೆ ಪೊಲೀಸರು ತೆರಳಿ ಪರಿಶೀಲನೆ ನಡೆಸುತ್ತಿದ್ದಾರೆ.
ಕೊಲೆಯಾದ ವ್ಯಕ್ತಿಯನ್ನು ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಪೇದೆಯಾಗಿ ಕೆಲಸ ನಿರ್ವಹಿಸಿದ್ದ ಪೂರ್ಣೇಶ್ ಎಂದು ಗುರುತಿಸಲಾಗಿದೆ. ಮದ್ಯವ್ಯಸನಿಯಾಗಿದ್ದ ಪೂರ್ಣೇಶ್, ಇದೇ ಕಾರಣಕ್ಕೆ ಪೊಲೀಸ್ ಕೆಲಸದಿಂದ ವಜಾಗೊಂಡಿದ್ದ ಎನ್ನಲಾಗಿದೆ. ಇದೀಗ ಅವರ ಕೊಲೆಯಾಗಿದೆ.
ವೈಯಕ್ತಿಕ ಕಲಹದಿಂದಾಗಿ ಕೊಲೆಯಾಗಿರಬಹುದು ಎಂದು ಶಂಕಿಸಲಾಗಿದೆ