ಮನೆ ಸುದ್ದಿ ಜಾಲ ಟಿಎಂಸಿ ಸಂಸದೆ ಸುಶ್ಮಿತಾ ದೇವ್ ರಾಜೀನಾಮೆ

ಟಿಎಂಸಿ ಸಂಸದೆ ಸುಶ್ಮಿತಾ ದೇವ್ ರಾಜೀನಾಮೆ

0

ಕೋಲ್ಕತ್ತಾ (ಪಶ್ಚಿಮ ಬಂಗಾಳ) : ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆ ಬಳಿಕ ತೃಣಮೂಲ ಕಾಂಗ್ರೆಸ್​ನಲ್ಲಿ ಬಂಡಾಯ ಹೆಚ್ಚಾಗಿದ್ದು, ವಿಧಾನಸಭೆ, ಲೋಕಸಭೆ ಬಳಿಕ ಇದೀಗ ರಾಜ್ಯಸಭಾ ಸಂಸದರಿಂದಲೂ ಭಿನ್ನಮತಗಳು ಭುಗಿಲೆದ್ದಿವೆ. ಹಿರಿಯ ನಾಯಕ ಸುಖೇಂದು ಶೇಖರ್​ ರಾಯ್​ ಬಳಿಕ ಸುಶ್ಮಿತಾ ದೇವ್​​ ಕೂಡ ರಾಜ್ಯಸಭೆ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಮೂಲಕ ಮಮತಾ ಬ್ಯಾನರ್ಜಿ ಪಕ್ಷದಲ್ಲಿ ಸಾಕಷ್ಟು ಬಿರುಕು ಮೂಡಿದೆ. ಕಾಂಗ್ರೆಸ್ ನಾಯಕ ಸಂತೋಷ್ ಮೋಹನ್ ದೇವ್ ಅವರ ಪುತ್ರಿ ಸುಷ್ಮಿತಾ ದೇವ್ ಅವರು ತಮ್ಮ ರಾಜೀನಾಮೆಯನ್ನು ಸಲ್ಲಿಸಿದ್ದಾರೆ. ಈ ರಾಜೀನಾಮೆ ಪರ್ವಗಳು ತೃಣಮೂಲ ಪಕ್ಷದ ಉನ್ನತ ನಾಯಕತ್ವದ ವಿರುದ್ಧ ಅಸಮಾಧಾನವನ್ನು ತೋರಿಸುತ್ತಿದೆ. 2021ರ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಗೆಲುವಿನ ನಂತರ, ತೃಣಮೂಲ ಕಾಂಗ್ರೆಸ್ ರಾಷ್ಟ್ರಮಟ್ಟದಲ್ಲಿ ತನ್ನ ಹೆಜ್ಜೆಗುರುತುಗಳನ್ನು ವಿಸ್ತರಿಸಲು ಯೋಜಿಸಿತ್ತು. ಅದರಂತೆ ಚುನಾವಣಾ ತಂತ್ರಜ್ಞ ಪ್ರಶಾಂತ್ ಕಿಶೋರ್ ಅವರ ಸಲಹೆಯ ಮೇರೆಗೆ ಪಕ್ಷದ ಅಖಿಲ ಭಾರತ ಪ್ರಧಾನ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿ, ಅಸ್ಸಾಂನಲ್ಲಿ ಕಾಂಗ್ರೆಸ್ ಪಕ್ಷದ ಭದ್ರಕೋಟೆಯಿಂದ ಸುಷ್ಮಿತಾ ದೇವ್ ಅವರನ್ನು ತೃಣಮೂಲ ಪಕ್ಷಕ್ಕೆ ಕರೆತಂದಿದ್ದರು ಎನ್ನಲಾಗಿದೆ.

ಹಾಗೂ ತ್ರಿಪುರ ಮತ್ತು ಅಸ್ಸಾಂನಲ್ಲಿ ಪಕ್ಷದ ಸಾಂಸ್ಥಿಕ ನೆಲೆಯನ್ನು ಬಲಪಡಿಸಲು, ಅವರನ್ನು ರಾಜ್ಯಸಭೆಗೆ ನಾಮನಿರ್ದೇಶನ ಮಾಡಿ ಸಂಸತ್ತಿಗೆ ಕಳುಹಿಸಿಕೊಟ್ಟಿದ್ದರು. ರಾಜಕೀಯ ವೀಕ್ಷಕರು ಗಮನಿಸುವಂತೆ ಈಶಾನ್ಯ ರಾಜ್ಯಗಳಿಗೆ ತೃಣಮೂಲ ಕಾಂಗ್ರೆಸ್ ವಿಸ್ತರಣೆಯು ಅಂತಿಮವಾಗಿ ಯಾವುದೇ ಫಲಿತಾಂಶಗಳನ್ನು ನೀಡಲಿಲ್ಲ. ಇದಕ್ಕೆ ವಿರುದ್ಧವಾಗಿ, ಬಂಗಾಳದ ಕೋಟಾದಡಿ ಬೇರೆ ರಾಜ್ಯದ ನಾಯಕನನ್ನು ರಾಜ್ಯಸಭೆಗೆ ಕಳುಹಿಸುವ ನಿರ್ಧಾರವು ಆ ಸಮಯದಲ್ಲಿ ಪಕ್ಷದ ಮತ್ತು ಹೊಸ ಬಂಗಾಳಿ ನಾಯಕರಲ್ಲಿ ತೀವ್ರ ಅಸಮಾಧಾನವನ್ನು ಹುಟ್ಟುಹಾಕಿತ್ತು. ಲೋಕಸಭಾ ಚುನಾವಣೆಯಲ್ಲಿ ತೃಣಮೂಲ ಟಿಕೆಟ್‌ಗಳ ಮೂಲಕ ಆಯ್ಕೆಯಾದ ಕನಿಷ್ಠ 20 ಸಂಸದರು ಈಗಾಗಲೇ ಮಮತಾ ಬ್ಯಾನರ್ಜಿ ನೇತೃತ್ವದ ಬಣದಿಂದ ದೂರ ಉಳಿದಿದ್ದಾರೆ.

ದೆಹಲಿಯ ಎನ್‌ಡಿಎ ಸರ್ಕಾರಕ್ಕೆ ಸೇರುವ ಇಚ್ಛೆಯನ್ನು ಅವರು ವ್ಯಕ್ತಪಡಿಸಿದ್ದಾರೆ. ಪಶ್ಚಿಮ ಬಂಗಾಳವು ಒಟ್ಟು 16 ರಾಜ್ಯಸಭಾ ಸ್ಥಾನಗಳನ್ನು ಹೊಂದಿದ್ದು, ಅವುಗಳಲ್ಲಿ 13 ಸ್ಥಾನಗಳನ್ನು ತೃಣಮೂಲ ಕಾಂಗ್ರೆಸ್ ಹೊಂದಿತ್ತು. ಹಿರಿಯ ನಾಯಕ ಸುಖೇಂದು ಶೇಖರ್ ರಾಯ್ ಈಗಾಗಲೇ ತೃಣಮೂಲ ಕಾಂಗ್ರೆಸ್ ಮತ್ತು ತಮ್ಮ ರಾಜ್ಯಸಭಾ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಪಕ್ಷದ ಆಂತರಿಕ ಗೊಂದಲಗಳ ನಡುವೆ ಸುಷ್ಮಿತಾ ದೇವ್ ರಾಜೀನಾಮೆ ನೀಡುವ ಮೂಲಕ ತೃಣಮೂಲ ಬಂಗಾಳದಿಂದ ಮತ್ತೊಂದು ರಾಜ್ಯಸಭಾ ಸ್ಥಾನವನ್ನು ಕಳೆದುಕೊಂಡಿದೆ ಎನ್ನೂವುದ್ದಾಗಿದೆ.