ಮನೆ ರಾಷ್ಟ್ರೀಯ ರಾಜಸ್ಥಾನದ 14ನೇ ಮುಖ್ಯಮಂತ್ರಿಯಾಗಿ ಇಂದು ಭಜನ್‌ ಲಾಲ್ ಶರ್ಮಾ ಪ್ರಮಾಣ ವಚನ ಸ್ವೀಕಾರ

ರಾಜಸ್ಥಾನದ 14ನೇ ಮುಖ್ಯಮಂತ್ರಿಯಾಗಿ ಇಂದು ಭಜನ್‌ ಲಾಲ್ ಶರ್ಮಾ ಪ್ರಮಾಣ ವಚನ ಸ್ವೀಕಾರ

0

ರಾಜಸ್ಥಾನ: ರಾಜಸ್ಥಾನದ 14ನೇ ಮುಖ್ಯಮಂತ್ರಿಯಾಗಿ ಭಜನ್‌ಲಾಲ್ ಶರ್ಮಾ ಇಂದು ಮಧ್ಯಾಹ್ನ 12.15ಕ್ಕೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

ಜೈಪುರದ ರಾಮ್ನಿವಾಸ್ ಬಾಗ್‌ನಲ್ಲಿರುವ ಆಲ್ಬರ್ಟ್ ಹಾಲ್ ಮುಂದೆ ಪ್ರಮಾಣವಚನ ಸಮಾರಂಭ ನಡೆಯಲಿದ್ದು ಅದಕ್ಕಾಗಿ ಎಲ್ಲಾ ತಯಾರಿಗಳನ್ನು ಮಾಡಲಾಗಿದೆ.

ಪ್ರಮಾಣವಚನ ಸಮಾರಂಭಕ್ಕೆ ಪ್ರಧಾನಿ ನರೇಂದ್ರ ಮೋದಿ, ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಕೇಂದ್ರ ಸಚಿವ ಅಮಿತ್ ಶಾ ಸೇರಿದಂತೆ ಹಲವು ಕೇಂದ್ರ ಸಚಿವರು ಭಾಗಿಯಾಗಲಿದ್ದಾರೆ.

ಇಂದು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿರುವ ಭಜನ್‌ಲಾಲ್ ಅವರ ಹುಟ್ಟುಹಬ್ಬವಾಗಿದ್ದು, ಈ  ಶುಭದಿನದಂದೇ ಪ್ರಮಾಣವಚನ ಕಾರ್ಯಕ್ರಮ ಆಯೋಜಿಸಿದ್ದು ಡಬಲ್ ಖುಷಿ ನೀಡಿದಂತಾಗಿದೆ. ಇದರೊಂದಿದೆ ಹುಟ್ಟುಹಬ್ಬದ ಸಂದರ್ಭದಲ್ಲಿ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಮೊದಲ ಮುಖ್ಯಮಂತ್ರಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಲಿದ್ದಾರೆ.

ಹಿಂದಿನ ಲೇಖನರಾಜ್ಯದಲ್ಲಿ ಮತ್ತೆ ಸುದ್ದಿ ಮಾಡಿದ ಸ್ಯಾಟ್’ಲೈಟ್ ಫೋನ್: ಯಾದಗಿರಿಯ ಸುರಪುರದಿಂದ ಪಾಕಿಸ್ತಾನಕ್ಕೆ ಕರೆ
ಮುಂದಿನ ಲೇಖನಮಂಡ್ಯ: ಬಾರ್ ನಲ್ಲಿ ಆರಂಭವಾದ ಗಲಾಟೆ ಕೊಲೆಯಲ್ಲಿ ಅಂತ್ಯ