ನವದೆಹಲಿ: ದೇಶದಲ್ಲಿ 2,64,202 ಜನರಲ್ಲಿ ಕೋವಿಡ್ ಸೋಂಕು ದೃಢಪಟ್ಟಿದ್ದು. ಕಳೆದ 24 ಗಂಟೆಗಳಲ್ಲಿ 315 ಮಂದಿ ಸಾವನ್ನಪ್ಪಿದ್ದಾರೆ ಎಂದು ಆರೋಗ್ಯ ಸಚಿವಾಲಯ ಹೇಳಿದೆ.
ಇದರೊಂದಿಗೆ ಸಕ್ರಿಯ ಸೋಂಕಿತರ ಸಂಖ್ಯೆ 12,72,073ಕ್ಕೆ ಏರಿಕೆಯಾಗಿದ್ದು, ಇದು 217 ದಿನಗಳ ಗರಿಷ್ಠವಾಗಿದೆ. ದೇಶದಲ್ಲಿ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 3,65,82,129ಕ್ಕೆ ಏರಿಕೆಯಾಗಿದೆ. ಅಲ್ಲದೇ ಕೋವಿಡ್ ನಿಂದ ಸಾವನ್ನಪ್ಪಿರುವವರ ಸಂಖ್ಯೆ 4,85,350ಕ್ಕೆ ಏರಿಕೆಯಾಗಿದೆ.
ಈ ನಡುವೆ ಕಳೆದ 24 ಗಂಟೆಗಳಲ್ಲಿ 1,09,345 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 3,48,24,706ಕ್ಕೆ ತಲುಪಿದೆ.
ಇನ್ನು ಭಾರತದಲ್ಲಿ ಒಂದೇ 18,86,935 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು, ಈ ವರೆಗೂ 69,73,11,627 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.
ಜನವರಿ ಅಂತ್ಯದವರೆಗೆ ಕೋವಿಡ್ ಮಾರ್ಗಸೂಚಿ ಮುಂದುವರಿಕೆ: ಸಚಿವ ಡಾ.ಕೆ.ಸುಧಾಕರ್.https://savaltv.com/covid-rules-extend-to-january-end/
ಭಾರತದಲ್ಲಿ ಜನವರಿ 16 ರಂದು ಸ್ವದೇಶಿ ನಿರ್ಮಿತ ಕೋವಿಶೀಲ್ಡ್ ಮತ್ತು ಕೋವ್ಯಾಕ್ಸಿನ್ ಕೊರೋನಾ ಲಸಿಕೆಗೆ ಪ್ರಧಾನಿ ಮೋದಿಯವರು ಚಾಲನೆ ನೀಡಿದ್ದು, ಕೇಂದ್ರ ಸರ್ಕಾರ ಮಾಹಿತಿ ಪ್ರಕಾರ ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ ಒಟ್ಟಾರೆ 15.17 ಕೋಟಿ ಜನರಿಗೆ ಲಸಿಕೆಯನ್ನು ನೀಡಲಾಗಿದೆ ಎಂದು ತಿಳಿಸಿದೆ.