ಟ್ರಿನಿಡಾಡ್ ನ ಬ್ರಿಯನ್ ಲಾರಾ ಸ್ಟೇಡಿಯಂನಲ್ಲಿ ಇಂದು ಭಾರತ ಹಾಗೂ ವೆಸ್ಟ್ ಇಂಡೀಸ್ ನಡುವಣ ಅಂತಿಮ ನಿರ್ಣಾಯಕ ಮೂರನೇ ಏಕದಿನ ಪಂದ್ಯ ಇಂದು ನಡೆಯಲಿದೆ.
ಮೂರು ಏಕದಿನದ ಎರಡು ಪಂದ್ಯಗಳಲ್ಲಿ ಭಾರತ-ವೆಸ್ಟ್ ಇಂಡೀಸ್ ತಲಾ 1-1 ಅಂಕಗಳ ಅಂತರದ ಸಮಬಲದಲ್ಲಿದೆ. ಹೀಗಾಗಿ ಇಂದಿನ ಪಂದ್ಯ ಉಭಯ ತಂಡಗಳಿಗೆ ಮಾಡು ಇಲ್ಲವೇ ಮಡಿ ಎಂಬಂತಾಗಿದ್ದು, ಗೆದ್ದವರಿಗೆ ಸರಣಿ ಸಿಗಲಿದೆ.
ಉಭಯ ತಂಡಗಳ ವಿವರ
ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಇಶಾನ್ ಕಿಶನ್, ಶುಭ್ಮನ್ ಗಿಲ್, ವಿರಾಟ್ ಕೊಹ್ಲಿ, ಸೂರ್ಯ ಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ (ಉಪನಾಯಕ), ಸಂಜು ಸ್ಯಾಮ್ಸನ್, ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಯುಜ್ವೇಂದ್ರ ಚಹಲ್, ಕುಲ್ದೀಪ್ ಯಾದವ್, ಮುಖೇಶ್ ಕುಮಾರ್, ಜಯದೇವ್ ಉನಾದ್ಕಟ್, ಉಮ್ರಾನ್ ಮಲಿಕ್, ರುತುರಾಜ್ ಗಾಯಕ್ವಾಡ್, ಅಕ್ಷರ್ ಪಟೇಲ್ ಆಡಲಿದ್ದರೆ .
ವೆಸ್ಟ್ ಇಂಡೀಸ್ ತಂಡ: ಶಾಯ್ ಹೋಪ್ (ನಾಯಕ), ರೋವ್ಮನ್ ಪೊವೆಲ್ (ಉಪನಾಯಕ), ಖೈಲ್ ಮೇಯರ್ಸ್, ಅಲಿಕ್ ಅಥಾನಾಝ್, ಕೀಸಿ ಕಾರ್ಟಿ, ಶಿಮ್ರೋನ್ ಹೆಟ್ಮೇರ್, ಅಲ್ಝಾರಿ ಜೋಸೆಫ್, ಡೊಮಿನಿಕ್ ಡ್ರೇಕ್ಸ್, ಯಾನಿಕ್ ಕ್ಯಾರಿಯಾ, ಗುಡಾಕೇಶ್ ಮೋಟಿ, ಬ್ರ್ಯಾಂಡನ್ ಕಿಂಗ್, ರೊಮೊರಿಯೊ ಶೆಫರ್ಡ್, ಜೇಡನ್ ಸೀಲ್ಸ್, ಕೆವಿನ್ ಸಿಂಕ್ಲೇರ್, ಒಶಾನೆ ಥಾಮಸ್ ಆಡಲಿದ್ದರೆ.
ಭಾರತ- ವೆಸ್ಟ್ ಇಂಡೀಸ್ ಮೂರನೇ ಏಕದಿನ ಪಂದ್ಯದ ಸಂಜೆ 7 ಗಂಟೆಗೆ ನಡೆಯಲಿದ್ದು, ಪಂದ್ಯ 7.30ಕ್ಕೆ ಶುರುವಾಗಲಿದೆ, ಇಂದಿನ ಪಂದ್ಯ ಕುತೂಹಲವನ್ನು ಹೆಚ್ಚಿಸಿದೆ. ಸರಣಿ ಗೆಲ್ಲಲು ಎರಡು ತಂಡಗಳು ಸಜ್ಜಾಗಿವೆ.