ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳಾಗಿರುವ ದರ್ಶನ್ ಮತ್ತು ಇತರ ಆರೋಪಿಗಳು ಇಂದು ಸೆಷನ್ಸ್ ಕೋರ್ಟ್‌ಗೆ ಹಾಜರಾಗಿದ್ದಾರೆ. ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಆರೋಪ ನಿಗದಿಯಾಗಿರುವ ಕಾರಣ ಖುದ್ದು ಹಾಜರಾಗಬೇಕೆಂದು ಜಡ್ಜ್ ಆದೇಶಿಸಿದ ಹಿನ್ನೆಲೆಯಲ್ಲಿ ಎಲ್ಲಾ ಆರೋಪಿಗಳು ನ್ಯಾಯಾಲಯಕ್ಕೆ ಆಗಮಿಸಿದ್ದಾರೆ.
ಪರಪ್ಪನ ಅಗ್ರಹಾರದಲ್ಲಿದ್ದ ದರ್ಶನ್, ಪವಿತ್ರಾ ಗೌಡ ಸೇರಿದಂತೆ ಎಲ್ಲಾ ಆರೋಪಿಗಳನ್ನು ಪೊಲೀಸರು ಬಿಗಿ ಭದ್ರತೆಯಲ್ಲಿ ನ್ಯಾಯಾಲಯಕ್ಕೆ ಕರೆದುಕೊಂಡು ಬಂದರು. ಆರೋಪ ನಿಗದಿಯಾಗುವ ಬಗ್ಗೆ ಮೊದಲೇ ಮಾಹಿತಿ ತಿಳಿದ ಕಾರಣ ಹಾಲ್‌ನಲ್ಲಿ ಭಾರೀ ಸಂಖ್ಯೆಯಲ್ಲಿ ವಕೀಲರು ಸೇರಿದ್ದಾರೆ. ಜನರು ಸೇರುತ್ತಿರುವ ಹಿನ್ನೆಲೆಯಲ್ಲಿ ಕೋರ್ಟ್ ಆವರಣದಲ್ಲಿ ಪೊಲೀಸರು ಭದ್ರತೆ ಹೆಚ್ಚಿಸಿದ್ದಾರೆ.















