ಮನೆ ರಾಷ್ಟ್ರೀಯ ಇಂದು ಜಮ್ಮು ಕಾಶ್ಮೀರ ವಿಧಾನಸಭೆಯ ಎರಡನೇ ಹಂತದ ಮತದಾನ

ಇಂದು ಜಮ್ಮು ಕಾಶ್ಮೀರ ವಿಧಾನಸಭೆಯ ಎರಡನೇ ಹಂತದ ಮತದಾನ

0

ಜಮ್ಮು ಮತ್ತು ಕಾಶ್ಮೀರ ವಿಧಾನಸಭೆಯ ಎರಡನೇ ಹಂತದ ಮತದಾನ ಇಂದು ಆರಂಭವಾಗಿದೆ.

Join Our Whatsapp Group

ಈ ಹಂತದಲ್ಲಿ 6 ಜಿಲ್ಲೆಗಳ 26 ವಿಧಾನಸಭಾ ಸ್ಥಾನಗಳಿಗೆ ಮತದಾನ ನಡೆಯುತ್ತಿದ್ದು, ಈ ಪೈಕಿ 3 ಜಿಲ್ಲೆಗಳು ಜಮ್ಮು ವಿಭಾಗದಲ್ಲಿ ಮತ್ತು 3 ಜಿಲ್ಲೆಗಳು ಕಣಿವೆಯಲ್ಲಿವೆ. ಈ ಹಂತದ ಪ್ರಮುಖ ಅಭ್ಯರ್ಥಿಗಳಲ್ಲಿ ಮಾಜಿ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ, ಜೆಕೆಪಿಸಿಸಿ ಅಧ್ಯಕ್ಷ ತಾರಿಕ್ ಹಮೀದ್ ಕರ್ರಾ ಮತ್ತು ಬಿಜೆಪಿ ಜಮ್ಮು ಮತ್ತು ಕಾಶ್ಮೀರ ಮುಖ್ಯಸ್ಥ ರವೀಂದ್ರ ರೈನಾ ಸೇರಿದ್ದಾರೆ.

ಎರಡನೇ ಹಂತದ ಚುನಾವಣೆಯಲ್ಲಿ ಸುಮಾರು 25 ಲಕ್ಷ ಮತದಾರರು 239 ಅಭ್ಯರ್ಥಿಗಳ ಭವಿಷ್ಯವನ್ನು ನಿರ್ಧರಿಸಲಿದ್ದಾರೆ. ಚುನಾವಣಾ ಆಯೋಗವು ಮತದಾರರ ಅನುಕೂಲಕ್ಕಾಗಿ 3,502 ಮತಗಟ್ಟೆಗಳನ್ನು ಸ್ಥಾಪಿಸಿದ್ದು, ಇವುಗಳಲ್ಲಿ 1,056 ನಗರ ಮತ್ತು 2,446 ಗ್ರಾಮೀಣ ಪ್ರದೇಶದಲ್ಲಿವೆ.

ಜಮ್ಮು ಮತ್ತು ಕಾಶ್ಮೀರದ ಮತದಾರರಿಗೆ ಮತದಾನ ಮಾಡುವಂತೆ ಪ್ರಧಾನಿ ಮೋದಿ ಮನವಿ ಮಾಡಿದರು.

ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ ಅವರು, ಇಂದು ಜಮ್ಮು ಮತ್ತು ಕಾಶ್ಮೀರದಲ್ಲಿ ವಿಧಾನಸಭೆ ಚುನಾವಣೆಗೆ ಎರಡನೇ ಸುತ್ತಿನ ಮತದಾನ ಶುರುವಾಗಿದೆ. ಎಲ್ಲಾ ಮತದಾರರು ತಮ್ಮ ಮತ ಚಲಾಯಿಸಿ ಪ್ರಜಾಪ್ರಭುತ್ವವನ್ನು ಬಲಪಡಿಸುವಲ್ಲಿ ಪ್ರಮುಖ ಪಾತ್ರ ವಹಿಸುವಂತೆ ನಾನು ಮನವಿ ಮಾಡುತ್ತೇನೆ. ಈ ಸಂದರ್ಭದಲ್ಲಿ, ಮೊದಲ ಬಾರಿಗೆ ಮತ ಚಲಾಯಿಸಲು ಹೊರಟಿರುವ ಎಲ್ಲಾ ಯುವ ಸ್ನೇಹಿತರಿಗೆ ನನ್ನ ಅಭಿನಂದನೆಗಳು ಎಂದು ಬರೆದಿದ್ದಾರೆ.

ಚುನಾವಣಾ ಆಯೋಗವು ಮತದಾರರ ಅನುಕೂಲಕ್ಕಾಗಿ 3,502 ಮತಗಟ್ಟೆಗಳನ್ನು ಸ್ಥಾಪಿಸಿದ್ದು, ಇವುಗಳಲ್ಲಿ 1,056 ನಗರ ಮತ್ತು 2,446 ಗ್ರಾಮೀಣ ಪ್ರದೇಶದಲ್ಲಿವೆ. ಎರಡನೇ ಹಂತದ ಚುನಾವಣೆಯಲ್ಲಿ ಸುಮಾರು 25 ಲಕ್ಷ ಮತದಾರರು 239 ಅಭ್ಯರ್ಥಿಗಳ ಭವಿಷ್ಯವನ್ನು ನಿರ್ಧರಿಸಲಿದ್ದಾರೆ.