ಮನೆ ಸುದ್ದಿ ಜಾಲ ಇಂದು SSLC ಪರೀಕ್ಷೆ- 1 ಫಲಿತಾಂಶ ಪ್ರಕಟಣೆ..!

ಇಂದು SSLC ಪರೀಕ್ಷೆ- 1 ಫಲಿತಾಂಶ ಪ್ರಕಟಣೆ..!

0

ಬೆಂಗಳೂರು : ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ- 1ರ ಫಲಿತಾಂಶ ಪ್ರಕಟಗೊಳ್ಳಿಸಿದ್ದಾರೆ. ಸುದ್ದಿಗೋಷ್ಠಿ ನಡೆಸಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಫಲಿತಾಂಶ ಪ್ರಕಟಿಸಲಿದ್ದಾರೆ.

ಸಚಿವರ ಸುದ್ದಿಗೋಷ್ಠಿ ಬಳಿಕ ಇಲಾಖೆ ವೆಬ್ ಸೈಟ್‌ನಲ್ಲಿ ಫಲಿತಾಂಶ ಲಭ್ಯವಾಗಲಿದೆ. ಹೈಕೋರ್ಟ್ ಆದೇಶದ ಹಿನ್ನೆಲೆ ಹಿಂದಿ ಸೇರಿ ತೃತೀಯ ಭಾಷೆಗೆ ಗ್ರೇಡ್ ಬದಲಾಗಿ ಅಂಕ ನೀಡಲಾಗಿದೆ. 525 ಬದಲಿಗೆ 625 ಅಂಕಕ್ಕೆ ಪರೀಕ್ಷಾ ಮಂಡಳಿ ಫಲಿತಾಂಶ ಪ್ರಕಟ ಮಾಡಲಿದೆ.

ಈ ಮೊದಲು ತೃತೀಯ ಭಾಷೆಗೆ ಗ್ರೇಡ್ ಅಂತ ಹೇಳಿ 525ಕ್ಕೆ ಫಲಿತಾಂಶ ಪ್ರಕಟಗೊಳ್ಳಲಿದೆ ಎಂದು ಶಿಕ್ಷಣ ಸಚಿವರು ಹೇಳಿದ್ದರು. ಈಗ ಹೈಕೋರ್ಟ್ ಆದೇಶ ಹಿನ್ನೆಲೆ ಶಿಕ್ಷಣ ಇಲಾಖೆ ಹಿಂದಿನAತೆ 625 ಅಂಕಗಳಿಗೆ ಫಲಿತಾಂಶ ಪ್ರಕಟಿಸಲಿದೆ.

ಈ ಬಾರಿ ಸುಮಾರು 8 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. 8 ಲಕ್ಷ ವಿದ್ಯಾರ್ಥಿಗಳ ಭವಿಷ್ಯ ಇಂದು ನಿರ್ಧಾರವಾಗಲಿದೆ. ಮಾರ್ಚ್ 18ರಿಂದ ಏಪ್ರಿಲ್ 2ರವರೆಗೆ ಪರೀಕ್ಷೆ ನಡೆದಿತ್ತು. ರಾಜ್ಯಾದ್ಯಂತ 2,871 ಕೇಂದ್ರಗಳಲ್ಲಿ ಪರೀಕ್ಷೆ ನಡೆದಿತ್ತು. ಈ ವರ್ಷ ಪ್ರಥಮ ಬಾರಿಗೆ ವಿದ್ಯಾರ್ಥಿಗಳ ಅಂಕಪಟ್ಟಿ ಡಿಜಿ ಲಾಕರ್‌ನಲ್ಲಿ ಲಭ್ಯವಿದೆ.

ಮಧ್ಯಾಹ್ನ 12 ಗಂಟೆ ನಂತರ ಅಂಕಪಟ್ಟಿ ಡೌನ್‌ಲೋಡ್ ಮಾಡಿಕೊಳ್ಳಬಹುದು. https://www.digilocker.gov.in ನಲ್ಲಿ ಅಂಕಪಟ್ಟಿ ಡೌನ್‌ಲೋಡ್‌ ಮಾಡಿಕೊಳ್ಳಬಹುದು. https://karresults.nic.in ನಲ್ಲಿ ಫಲಿತಾಂಶ ಲಭ್ಯವಿರಲಿದೆ. Karnatakaone ಮೊಬೈಲ್‌ ಆಪ್‌ನಲ್ಲಿ ಫಲಿತಾಂಶ ಲಭ್ಯವಾಗಲಿದೆ.