ಮೈಸೂರು: ಜೀವ ನಮ್ಮ ಮಾತನ್ನು ಕೇಳುವುದಿಲ್ಲ. ಯಾವಾಗ ಬೇಕಾದರೂ ಹೋಗಬಹುದು. ಆದರೆ ಜೀವನ ನಮ್ಮ ಮಾತನ್ನು ಕೇಳುವ ಕಾರಣ, ಹೇಗೆ ಬೇಕಾದರೂ ಅದನ್ನು ರೂಪಿಸಿಕೊಳ್ಳಬಹುದು ಎಂಬ ಸ್ವಾಮಿ ವಿವೇಕಾನಂದರ ಮಾತಿನಂತೆ ಇಂದಿನ ವಿದ್ಯಾರ್ಥಿಗಳು ಯುವಕರು ಎಚ್ಚೆತ್ತುಕೊಳ್ಳಬೇಕೆಂದು ಭಾರತ ಸೇವಾದಳದ ರಾಜ್ಯ ಸಂಪನ್ಮೂಲ ಶಿಕ್ಷಕರಾದ ಡಿ ಆರ್ ಶೇಷಾಚಲ ಅವರು ತಿಳಿಸಿದ್ದಾರೆ.
ಕೇಂದ್ರ ಸಂವಹನ ಇಲಾಖೆ ವಾರ್ತಾ ಮತ್ತು ಪ್ರಸಾರ ಸಚಿವಾಲಯ ಮೈಸೂರು ವತಿಯಿಂದ ಶ್ರೀ ವಾಣಿವಿಲಾಸ ಅರಸು ಬಾಲಿಕ ಪ್ರೌಢಶಾಲೆಯಲ್ಲಿ ಸ್ವಾಮಿ ವಿವೇಕಾನಂದರ ಜನ್ಮ ಜಯಂತಿ ಅಂಗವಾಗಿ ವಿಶೇಷ ಉಪನ್ಯಾಸ ಕಾರ್ಯಕ್ರಮ ಆಯೋಜಿಸಲಾಗಿತ್ತು.
ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದ ಭಾರತ ಸೇವಾದಳದ ಡಿ ಆರ್ ಶೇಷಾಚಲ ಅವರು, ಸ್ವಾಮಿ ವಿವೇಕಾನಂದರ ಜೀವನಗಾಥೆಯನ್ನು ವಿವರಿಸಿದರು. ಅವರ ಸ್ಫೂರ್ತಿಯುತ ಭಾಷಣಗಳು, ದೇಶಭಕ್ತಿ, ದೇಶದ ಬೆಳವಣಿಗೆಯಲ್ಲಿ ಯುವಕರ ಪಾತ್ರದ ಬಗ್ಗೆ ತಿಳಿಸಿಕೊಟ್ಟರು.
ಮಾಹಿತಿ ಉಪಯುಕ್ತವಾಗಿದೆ ಎಂದು ವಿದ್ಯಾರ್ಥಿನಿಯರು ಅಭಿಪ್ರಾಯಪಟ್ಟರು. ಕೇಂದ್ರ ಸಂವಹನ ಇಲಾಖೆಯ ಕ್ಷೇತ್ರ ಪ್ರಚಾರ ಅಧಿಕಾರಿ ಶೃತಿ ಎಸ್ ಟಿ ಪ್ರಾಸ್ತವಿಕವಾಗಿ ಮಾತನಾಡಿದರು.
ಮುಖ್ಯ ಉಪಾಧ್ಯಯರಾದ ಎನ್ ಸುಬ್ರಹ್ಮಣ್ಯ ಅಧ್ಯಕ್ಷೀಯ ನುಡಿ ನುಡಿದರು. ಕ್ಷೇತ್ರ ಪ್ರಚಾರ ಸಹಾಯಕ ಪಿ ದರ್ಶನ್, ಸಿದ್ದರಾಜು ಉಪಸ್ಥಿತರಿದ್ದರು. ಶಿಕ್ಷಕರಾದ ತೇಜವತಿ ಎಸ್ ನಿರೂಪಿಸಿದರು, ಶಶಿಕಲಾ ಎಂ ವಂದಿಸಿದರು.